

ಮಂಡ್ಯ: ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್, ಜೂಜು ಸೇರಿದಂತೆ ಅಕ್ರಮ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಬೇಕೆಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಒತ್ತಾಯಿಸಿದರು.
ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜಮೀನುಗಳಲ್ಲಿ ಜೂಜಾಟ ಎಗ್ಗಿಲ್ಲದೆ ನಡೆಯುತ್ತಿದೆ. ಪರಿಣಾಮ ಸಾವಿರಾರೂ ಯುವಕರು ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲದ ಬಲೆಗೆ ಸಿಲುಕುತ್ತಿದ್ದಾರೆ. ಹಲವು ದಿನದಿಂದ ಇಂತಹ ದಂಧೆ ನಡೆಯುತ್ತಿದೆ. ಇಂತಹ ಮಾಫಿಯಾದಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಅತ್ಯಂತ ವ್ಯವಸ್ಥಿತ ಹಾಗೂ ಸಂಘಟಿತವಾಗಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜೂಜು, ಅಕ್ರಮ ಮದ್ಯ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿದರು.