

ಇಂಡಿ: ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದರೂ ಮೌನವಾಗಿ ಕುಳಿತಿದ್ದಾರೆ.
ಈ ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಗುರುವಾರ ಕರ್ನಾಟಕ ರಾಷ್ಟ್ರ ಸಮಿತಿ ಪದಾಧಿಕಾರಿಗಳು ಅಬಕಾರಿ ಸಿಪಿಐ ರಾಹುಲ್ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರ ಸಮಿತಿ ಜಿಲ್ಲಾ ಅಧ್ಯಕ್ಷ ಅಶೋಕ ಜಾಧವ ಮಾತನಾಡಿ, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ.
ಸಾರಾಯಿ ಕುಡಿದು ಬಡ ಜನರ ಬದುಕು ಬೀದಿಗೆ ಬರುತ್ತಿದೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮತ್ತು ಪಾನ್ಶಾಪ್ಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಕೂಲಿ-ನಾಲಿ ಮಾಡಿ ಬದುಕುತ್ತಿರುವ ಹೆಣ್ಣು ಮಕ್ಕಳು ಜೀವನ ನಡೆಸುವುದು ಕಷ್ಟಕರವಾಗಿದೆ.
ಇದನ್ನೂ ಓದಿ: ಚಿತ್ರನಟ ಉಪೇಂದ್ರರನ್ನು ಶಿಕ್ಷೆಗೊಳಪಡಿಸಿ
ಬಹುತೇಕ ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕ ಮತ್ತು ರೈತ ಕುಟುಂಬಗಳು ಇರುತ್ತವೆ. ಅವರ ಜೀವನ ಅಪರೋಕ್ಷವಾಗಿ ಅಧಿಕಾರಿಗಳು ಹಾಳು ಮಾಡಿದಂತಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟ ಸ್ಥಗಿತಗೊಳಿಸದಿದ್ದರೆ ಕೆಆರ್ಎಸ್ ಸಂಘಟನೆಯಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಲೂಕು ಅಧ್ಯಕ್ಷ ಗಣಪತಿ ರಾಠೋಡ, ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ, ಕಾರ್ಯದರ್ಶಿ ಲಕ್ಷ್ಮಣ ಚಡಚಣ ಹಾಗೂ ಕೆಆರ್ಎಸ್ ಪಕ್ಷದ ಸೈನಿಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.