ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿ ಹಿಂಪಡೆಯಲು ಆಗ್ರಹ

9
Published on

ಮೈಸೂರು: ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಿಸುವಲ್ಲಿನ ವಿಳಂಬ ಹಾಗೂ ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿ ಹಿಂಪಡೆಯಲು ಆಗ್ರಹಿಸಿ ಮೈಸೂರು ವಿವಿ ಕ್ರಾಫರ್ಡ್ ಹಾಲ್ ಮುಂಭಾಗ ಗುರುವಾರ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಕಳೆದ ಸರ್ಕಾರ ಅತ್ಯಂತ ತರಾತುರಿಯಲ್ಲಿ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ಎನ್‌ಇಪಿ-2020ನ್ನು ಜಾರಿ ಮಾಡಿತು. ಎನ್‌ಇಪಿ-2020 ಭಾಗವಾಗಿದ್ದ ನಾಲ್ಕು ವರ್ಷದ ಪದವಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಿಕೆ ಮಾಡಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವನ್ನುಂಟು ಮಾಡಿತು.

ಜನಪರ ಶಿಕ್ಷಣ ನೀತಿ ರೂಪಿಸಲು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯಿಂದ ಕರ್ನಾಟಕದ 23 ಸಾವಿರಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ಸಮೀಕ್ಷೆಯನ್ನು ನಡೆಸಲಾಯಿತು. ಈ ಸಮೀಕ್ಷೆಯಲ್ಲಿ ಶೇ.83ರಷ್ಟು ವಿದ್ಯಾರ್ಥಿಗಳು ನಾಲ್ಕು ವರ್ಷದ ಪದವಿ ಬೇಡವೆಂದು ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರ ರಚಿಸಿರುವ ರಾಜ್ಯ ಶಿಕ್ಷಣ ಆಯೋಗ ರಾಜ್ಯ ಶಿಕ್ಷಣ ನೀತಿ ಕುರಿತಾದ ಅಂತಿಮ ವರದಿಯನ್ನು ಆಗಸ್ಟ್‌ನಲ್ಲಿ ನೀಡುವುದಾಗಿ ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ. 4 ವರ್ಷದ ಪದವಿ ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಸರ್ಕಾರದ ಈ ವಿಳಂಬ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net