

ಕುಂದಾಪುರ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಬನ್ನಾಡಿ ಅಜಿತ್ ಕುಮಾರ್ ಶೆಟ್ಟಿ ಎಂಬುವರಿಗೆ ಭರತ್‌ದಾಸ್ ಎಂಬಾತ ಕರೆ ಮಾಡಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಒಡ್ಡಿದ್ದು, ಹಣ ನೀಡದಿದ್ದರೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕೋಟ ಠಾಣೆಯಲ್ಲಿ ದೂರು ನೀಡಲಾಗಿದೆ.
ಆ.31ರಂದು ಸಾಯಂಕಾಲ ಅಜಿತ್ ಕುಮಾರ್ ಶೆಟ್ಟಿಯವರಿಗೆ ವಾಟ್ಸಾೃಪ್ ಕರೆ ಬಂದಿದ್ದು, ಕರೆ ಮಾಡಿದಾತ ನನಗೆ 10 ಲಕ್ಷ ರೂ. ಕೂಡಲೇ ನೀಡಬೇಕು. ಇಲ್ಲವಾದಲ್ಲಿ ಕೊಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆನ್ನಲಾಗಿದೆ. ಸ್ವಲ್ಪ ಸಮಯದ ನಂತರ ಧ್ವನಿ ಮುದ್ರಿತ ಮೆಸೇಜ್ ಬಂದಿದ್ದು, ಅದರಲ್ಲಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಕೊಲೆಗೈಯುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂದು ಅಜಿತ್ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.