

ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ನಗರಸಭೆ ಹಾಗೂ ಸಿಡಿಎ ಆಯುಕ್ತರು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿಕನಕರಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹೋರಾಟಗಾರ ಸಿ.ಎನ್.ದೇವರಾಜ್ ಅರಸ್, ಅಕ್ರಮ ಕಟ್ಟಡದ ನಿರ್ಮಾಣದ ಸಂಬAಧ ಸಿಡಿಎ, ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಯುಕ್ತರಿಗೆ ಪತ್ರಮುಖೇನ ತಿಳಿಸಿದ್ದರೂ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಕೂಡಲೇ ಸಂಬAಧಪಟ್ಟ ಅಧಿಕಾರಿಗಳು ತುರ್ತಾಗಿ ಕೆ.ಎಂ.ರಸ್ತೆಯಲ್ಲಿ ಎರಡು, ಎಂ.ಜಿ.ರಸ್ತೆಯಲ್ಲಿ ಐದು, ಜೈನ್ ಟೆಂಪಲ್ ರಸ್ತೆ ಒಂದು ಹಾಗೂ ಅಂಬೇಡ್ಕರ್ ರಸ್ತೆ (ಮಾರ್ಕೆಟ್ ರಸ್ತೆ) ನಾಲ್ಕು ಸೇರಿ ಒಟ್ಟು ೧೨ ಅನಧಿಕೃತ ಕಟ್ಟಡಗಳನ್ನು ನಿರ್ಮಿಸಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರಾದ ಜನಾರ್ಧನ್, ಮಹೇಶ್, ಶಿವರಾಜ್, ಅರವಿಂದ್ ಉಪಸ್ಥಿತರಿದ್ದರು.