ವಿಶೇಷ ಪೊಲೀಸ್ ಠಾಣೆ ಸ್ಥಾಪನೆಗೆ ಆಗ್ರಹ

Demanding the establishment of a Special Police Station
ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆ ಸ್ಥಾಪನೆಗೆ ಆಗ್ರಹಿಸಿ ವುಇಜಯಪುರದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ವತಿಯಿಂದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
Published on

ವಿಜಯಪುರ: ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆ ಸ್ಥಾಪನೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಮಾತನಾಡಿ, ಇತ್ತೀಚೆಗೆ ರಾಜ್ಯದಲ್ಲಿ ದಿನಂಪ್ರತಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಿಂದ ದಲಿತರಿಗೆ ಅನ್ಯಾಯವಾಗುತ್ತಿದೆ. ಕೇವಲ ಶೋಷಣೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

1989ರ ಪ್ರಕಾರ ದಲಿತರ ಮೇಲೆ ಆದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ, ಅದರ ವಿರುದ್ದವಾಗಿ ಕೌಂಟರ್ ಕೇಸುಗಳನ್ನು ದಾಖಲಾಗುತ್ತಿವೆ. ಅಂತಹ ಕೌಂಟರ್ ಕೇಸುಗಳ ವಿರುದ್ಧ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸುವಂತೆ ಅಲ್ಲದೆ, ಮುಂಬರುವ ದಿನಗಳಲ್ಲಿ ನಡೆಯುವ ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವಂತೆ ಅವರು ಆಗ್ರಹಿಸಿದರು.

ಮಹಿಳಾ ಒಕ್ಕೂಟದ ಸಂಚಾಲಕಿ ಸವಿತಾ ವಗ್ಗರ, ಜಿಲ್ಲಾ ಸಂಘಟನಾ ಸಂಚಾಲಕರಾಧ ಚೇತನ ತೊರವಿ, ಯಲ್ಲಪ್ಪ ಕಾಂಬಳೆ, ಭೀಮಣ್ಣ ಹಂಚಿನಾಳ, ಭಾಸ್ಕರ ಬೋರಗಿ, ಸುಖದೇವ ಕಟ್ಟಿಮನಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net