

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ತನ್ನದೇ ಆದ ಸಂವಿಧಾನವನ್ನು ಅಂಗೀಕರಿಸಿದೆ. ಜನತೆಗೆ ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವ ತಿಳಿಯಬೇಕು ಜತೆಗೆ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎ ಬಿ ಬಸವರಾಜು ತಿಳಿಸಿದರು.
ದೇವನಹಳ್ಳಿ ಟೌನ್‌ನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯಮಟ್ಟದಲ್ಲಿ ಬೈಕ್‌ರೈಡರ್‌ಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಸೈಕಲ್ ಜಾಥಾ ಮಾಡುತ್ತಾ ಪ್ರಜಾಪ್ರಭುತ್ವ ಜಾಗೃತಿ ಮೂಡಿಸುತ್ತಿದ್ದೇವೆ ಜತೆಗೆ ಕಳೆದ ಮೂರು ದಿನಗಳಿಂದ ಎಲ್ಲ ತಾಲೂಕಿನಲ್ಲಿ ಇದರ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಈ ದಿನ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕೆಂದು ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.
ಮತದಾರರ ಸೇರಿಸುವ ಪ್ರಕ್ರಿಯೆ: ಸಂವಿಧಾನದ 324ನೇ ವಿಧಿ ಭಾರತ ಚುನಾವಣಾ ಆಯೋಗ ದೇಶದಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ ಶೇ. 98 ಜನಸಂಖ್ಯೆ ಮತದಾರರ ಪಟ್ಟಿಯಲ್ಲಿದ್ದಾರೆ ಮೊದಲಿಗೆ ಇಲ್ಲಿಯವರೆಗೂ ಮತದಾರರನ್ನು ಮತದಾನ ಪಟ್ಟಿಗೆ ಸೇರಿಸುವ ಕೆಲಸ ಮಾಡುತ್ತಾ ಬಂದಿದೆ ಎಂದು ಸಿಇಒ ಡಾ.ಕೆ.ಎನ್.ಅನುರಾಧಾ ತಿಳಿಸಿದರು. ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಲ್ಲಿಯೂ ಕೂಡ ಮತದಾರರನ್ನು ಮತದಾನ ಪಟ್ಟಿಗೆ ಮತದಾರರನ್ನು ಸೇರಿಸುವ ಪ್ರಕ್ರಿಯೆ ಮಾಡುತ್ತಿದ್ದೇವೆ. ಮತದಾನದಿಂದ ಯಾರೊಬ್ಬರೂ ವಂಚಿತರಾಗದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸುವಂತಹ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬೀದರ್‌ನಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಷ್ಟ್ರದಾದ್ಯಂತ ಚರ್ಚೆಯಲ್ಲಿದೆ ಅದೇ ರೀತಿ ವಿಶೇಷ ತೀರ ಮತದಾರರ ಪರಿಷ್ಕರಣ ಪಟ್ಟಿಯನ್ನು ತಯಾರಿಸಲು ಪೂರ್ವ ಸಿದ್ಧತೆಗಳು ಮಾಡಿಕೊಳ್ಳುತ್ತಿದ್ದೀರಿ ಅದರಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಮನೆ ಮನೆಗೆ ಬಂದು ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಸಂದರ್ಭದಲ್ಲಿ ಮತದಾರರು ಸಹಕರಿಸಬೇಕಾಗಿದೆ ಬೇರೆಯವರು ಬಂದು ಮತದಾನ ಮಾಡಿದ್ದಾರೆ ಎಂಬ ಭಯ ತೊಡೆದುಹಾಕಿ ಜನಸಂಖ್ಯೆ ಆಧಾರದ ಮೇಲೆ ಹೊಸಬರನ್ನು ಸೇರಿಸಿಸುವ ಪ್ರಕ್ರಿಯೆ ಬಂದಿದೆ ಹಾಗಾಗಿ ಎಲ್ಲರೂ ಕೂಡ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಅರ್ಥಪೂರ್ಣ ಆಚರಣೆ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ರಾಜಣ್ಣ ಮಾತಾನಾಡಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಾಗಿ ಆಚರಿಸಲಾಗಿದೆ ಎಂದು ತಿಳಿಸಿದರು. ದೇಶದ ಪ್ರತಿ ಪ್ರಜೆಗೂ ಸಮನಾದ ನ್ಯಾಯ ಸಿಗಬೇಕು ಎಂಬುದು ಗಾಂಧೀಜಿ ಅವರ ಆಶಯವಾಗಿತ್ತು ಅದರಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತದ ಬಹತ್‌ಸಂವಿಧಾನ ರಚಿಸಲಾಯಿತು. ಸುರಕ್ಷಿತ ಯುವ ಸಮುದಾಯ ಪ್ರಜಾಪ್ರಭುತ್ವ ದೇಶದ ಒಂದು ದೊಡ್ಡ ಆಸ್ತಿ ಇದ್ದಂತೆ. ಉತ್ತಮ ಶಿಕ್ಷಣದ ಮೂಲಕ ಯುವಪೀಳಿಗೆಗೆ ಶಕ್ತಿ ತುಂಬಬೇಕಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರನ್ನು ನಾವು ಸ್ಮರಿಸುವ ಮೂಲಕ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸೋಣ. ಇಡೀ ವಿಶ್ವದಲ್ಲೇ ಭಾರತದ ಪ್ರಜಾಪ್ರಭುತ್ವಕ್ಕೆ ವಿಶಿಷ್ಟ ಸ್ಥಾನವಿದೆ. ನಾವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡೋಣ ಎಂದರು.