ಪ್ರಜಾತಂತ್ರ ಬಲವರ್ಧನೆ ಅನಿವಾರ್ಯ - ಪ್ರೊ. ಎಸ್.ಎಂ. ಗಂಗಾಧರಯ್ಯ

1010
Published on

ಬೆಳಗಾವಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ ಪಾತ್ರ ವಹಿಸುತ್ತದೆ. ರಾಷ್ಟ್ರವು ಸ್ವಾವಲಂಬಿ ಹಾಗೂ ಭದ್ರತೆಯಿಂದ ಇರಬೇಕಾದರೆ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುವ ಅನಿವಾರ್ಯತೆ ಇದೆ ಎಂದು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ ಮುಖ್ಯಸ್ಥ ಪ್ರೊ. ಎಸ್.ಎಂ. ಗಂಗಾಧರಯ್ಯ ಅಭಿಪ್ರಾಯಪಟ್ಟರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಗುರುವಾರ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಪೋಸ್ಟರ್ ಮತ್ತು ಕೊಲಾಜ್ ಮೇಕಿಂಗ್ ಹಾಗೂ ರಸಪ್ರಶ್ನೆ ಸ್ಪರ್ಧೆ ಉದ್ದೇಶಿಸಿ ಅವರು ಮಾತನಾಡಿದರು. ಮುಂಬರುವ ಗ್ರಾಪಂ ಚುನಾವಣೆೆಗಳಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಿ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು.

ಆ ಮೂಲಕ ಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ನನಸಾಗಿಸಬೇಕು ಎಂದು ಸಲಹೆ ನೀಡಿದರು. ಪೋಸ್ಟರ್, ಕೊಲಾಜ್ ಮೇಕಿಂಗ್ ಸ್ಪರ್ಧೆಯಲ್ಲಿ ಸಾವಿತ್ರಿ ಮೊಕಾಶಿ, ನಿವೇದಿತಾ ಮೂಲಿಮನಿ, ರಸಪ್ರಶ್ನೆ ಸ್ಪರ್ಧೆಯಲ್ಲಿ ಗುರುನಾಥ ನಾಯ್ಕರ್ ಪ್ರಥಮ ಸ್ಥಾನ ಗಳಿಸಿದರು. ಡಾ.ಗಜಾನನ ನಾಯ್ಕ ತೀರ್ಪುಗಾರರಾಗಿದ್ದರು. ಡಾ.ಮೈತ್ರೇಯಿಣಿ ಗದಿಗೆಪ್ಪ ಗೌಡರ ಹಾಗೂ ಡಾ. ಪಿ.ನಾಗರಾಜ ಉಪಸ್ಥಿತರಿದ್ದರು. ಡಾ.ಶೋಭಾ ನಾಯಕ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net