

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರದ ಆದೇಶದಂತೆ ಸೆ. 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುವುದು. ತಾಲೂಕಿನ ತೇಗೂರ ಗ್ರಾಮದಿಂದ ಮಾವಿನಕೊಪ್ಪ ಗ್ರಾಮವರೆಗೆ ಸುಮಾರು 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಅಽಕಾರಿಗಳು ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸೆ. 15ರಂದು ಬೆಳಗ್ಗೆ 8 ಗಂಟೆಗೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಮೂಲಕ ಧಾರವಾಡ ಜಿಲ್ಲೆಯ ತೇಗೂರ ಗ್ರಾಮದಿಂದ ಮಾನವ ಸರಪಳಿ ಆರಂಭವಾಗುತ್ತದೆ. ಅಲ್ಲಿಂದ ಧಾರವಾಡ ತಾಲೂಕಿನ ಮಾವಿನಕೊಪ್ಪ ಗ್ರಾಮದ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಮುಂದುವರಿಯುತ್ತದೆ. 9 ಗ್ರಾಮ ಪಂಚಾಯಿತಿಗಳ 18 ಗ್ರಾಮಗಳಲ್ಲಿ ಮತ್ತು ಧಾರವಾಡ ನಗರದಲ್ಲಿ ಮಾನವ ಸರಪಳಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು, ಎನ್‌ಸಿಸಿ, ಸ್ಕೌಟ್ಸ್, ಹೋಂ ಗಾರ್ಡ್ಸ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಸಾರ್ವಜನಿಕರು, ಚುನಾಯಿತ ಪ್ರತಿನಿಽಗಳು, ಸಂಘ ಸಂಸ್ಥೆಗಳ ಪದಾಽಕಾರಿಗಳು ಸೇರಿ 55 ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು.
ಅAದು ಬೆಳಗ್ಗೆ 8.30ಕ್ಕೆ ಮಾನವ ಸರಪಳಿ ಆರಂಭವಾಗುತ್ತದೆ. ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯಿAದ 8.30ರಿಂದ 8.40ರವರೆಗೆ ಮಾನವ ಸರಪಳಿ ಚಿತ್ರೀಕರಣ ನಡೆಯಲಿದೆ. ಮಾನವ ಸರಪಳಿಯಲ್ಲಿ ಪಾಲ್ಗೊಂಡವರಿ0ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವಿದೆ. ಇದರಲ್ಲಿ ಎಲ್ಲ ಇಲಾಖೆಗಳ ಅಽಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಉಪ ವಿಭಾಗಾಽಕಾರಿ ಶಾಲಂ ಹುಸೇನ್ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.