ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ

Screenshot_2024-04-20-17-19-59-61.jpg
Published on

ಬೆಳಗಾವಿ: ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 7 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ದೇಶ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಪಂ ಸಿಇಒ ರಾಹುಲ ಶಿಂಧೆ ಅವರು ಕರೆ ನೀಡಿದರು.

ಚಿಕ್ಕೋಡಿ ತಾ.ಪಂ. ಕಚೇರಿ ಆವರಣದಲ್ಲಿ ಶನಿವಾರ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಹಾಗಾಗಿ ಎಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದರು.

ದೇಶದಲ್ಲಿ ಉತ್ತಮ ಆಡಳಿತ ವ್ಯವಸ್ಥೆ ಹೊಂದಲು ಮತದಾರರ ಪಾತ್ರ ತುಂಬ ಮಹತ್ವದಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ದಿನದಂದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು. ಎಂಭೈತ್ತೆöÊದು ವರ್ಷ ಮೇಲ್ಪಟ್ಟ ವಯೋವೃದ್ಧರಿಗಾಗಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. 

ಮೇ 7ರಂದು ಜರುಗಲಿರುವ ಮತದಾನದ ದಿನದಂದು ಅರ್ಹ ಮತದಾರರೆಲ್ಲರೂ ಉದಾಸೀನ ಮನೋಭಾವ ತೋರದೆ ತಮ್ಮ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವದರ ಜೊತೆಗೆ ತಮ್ಮ ಅಕ್ಕ, ಪಕ್ಕದವರಿಗೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿ ಮತ ಚಲಾಯಿಸಲು ಪ್ರೆರೇಪಿಸಬೇಕು. 

ಮತದಾನದ ದಿನದಂದು ಮತಗಟ್ಟೆಗಳಲ್ಲಿ ಕುಡಿಯುವ ನೀರು, ಕಾಯುವಿಕೆ ಸ್ಥಳ ಸೇರಿ ಅಗತ್ಯದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅರ್ಹ ಮತದಾರರೆಲ್ಲರೂ ಮತದಾನದ ದಿನದಂದು ತಪ್ಪದೇ ಮತಗಟ್ಟೆಗಳಿಗೆ ಆಗಮಿಸಿ ಮತ ಹಾಕಬೇಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿ ರಾಯಭಾರಿ ರಾಘವೇಂದ್ರ ಅನ್ವೇಕರ, ಕೃಷ್ಣರಾಜ, ಗಂಗಮ್ಮ ಹಿರೇಮಠ,

ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ವಿಕಲಚೇತನರು ಇದ್ದರು.

ಜಗದೀಶ ಕಮ್ಮಾರ ಮತದಾನ ಜಾಗೃತಿ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. 

ಜಾನಪದ ಕಲಾತಂಡಗಳೊಂದಿಗೆ ತಾಪಂ ಆವರಣದಿಂದ ಪ್ರಾರಂಭಗೊಂಡು ಬೈಕ್ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net