ಪ್ರಜಾಪ್ರಭುತ್ವ ಇನ್ನೂ ಗಟ್ಟಿ ಆಗಲಿ

26Athni1
Published on

ಅಥಣಿ: ಸಮಾನತೆಯ ತತ್ತ್ವದಡಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಬಲಯುತವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ತಾಲೂಕಾಡಳಿತ ಭೋಜರಾಜ ದೇಸಾಯಿ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರ ಎನ್ನುವ ಹೆಮ್ಮೆ ನಮಗಿರಬೇಕು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ತಹಸೀಲ್ದಾರ್ ಸಿದರಾಯ ಭೋಸಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಾ.ಎಂ.ಜಿ.ಹಂಜಿ, ಕೆ.ಎ.ವನಜೋಳ, ಬಿ.ಆರ್.ಬಡಿಗೇರ, ಅಪ್ಪಾಸಾಬ್ ಅಲಿಬಾದಿ, ಎ.ಎಸ್.ತೆಲಸಂಗ, ರಾಕೇಶ ಮೈಗೂರ ಮತ್ತಿತರರನ್ನು ಸನ್ಮಾನಿಸಲಾಯಿತು. ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ತಾಪಂ ಇಒ ಶಿವಾನಂದ ಕಲ್ಲಾಪೂರ, ಬಿಇಒ ಎಂ.ಬಿ.ಮೊರಟಗಿ, ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಪುರಸಭಾ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net