ಪ್ರಜಾಪ್ರಭುತ್ವ ಗಟ್ಟಿಯಾಗಲು ವೋಟ್ ಮಾಡಿ

29 Arakera Photo 01
Published on

ಅರಕೇರಾ: ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಗ್ರಾಪಂ ಕಾರ್ಯದರ್ಶಿ ಶಿವರಾಜ ಬೋವಿ ಹೇಳಿದರು.

ಬಿ.ಗಣೇಕಲ್ ಗ್ರಾಮದಲ್ಲಿ ತಾಲೂಕು ಆಡಳಿತ, ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಸಂವಿಧಾನ ನೀಡಿರುವ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವುದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದ ಮತದಾನದ ಹಕ್ಕು ಚಲಾವಣೆ ಆಗಬೇಕು ಎಂದರು.

ಗ್ರಾಪಂ ಕಾರ್ಯಾಲಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮತದಾರರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಾಗೃತಿ ನಾಮಫಲಕದ ಮೂಲಕ ಮತದಾನದ ಮಹತ್ವ ಸಾರಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net