ಯುವ ಸಮುದಾಯ ಜಾಗೃತವಾದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಸಚಿವ ಸಂತೋಷ ಲಾಡ್

Screenshot_2025-09-16-13-38-47-15.jpg
Published on

ಧಾರವಾಡ: ಸಮಾಜದ ಎಲ್ಲರಿಗೂ ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಪ್ರಜೆಗಳೆ ಪ್ರಜಾಪ್ರಭುತ್ವದ ಜೀವಾಳ ಎಂದು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ಇಲ್ಲಿನ ಕರ್ನಾಟಕ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಸದೃಡವಾಗಿ ಉಳಿಯಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ನಂಬಿಗೆ ಉಳ್ಳವರು, ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಇಂದು ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಸಮಾಜವನ್ನು ಉಳಿಸುವ, ಪ್ರಜಾಪ್ರಭುತ್ವ ಕಾಪಾಡುವ ಕಾರ್ಯ ಯುವಜನರ ಕೈಯಲ್ಲಿದೆ. ಇಂದಿನ ಯುವಕರು ಜಾಗೃತರಾಗಬೇಕು ಎಂದರು.

ಮೀಸಲಾತಿ ಪರಿಕಲ್ಪನೆ ಬಂದಿದ್ದು ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ ಎಂದರು.

ಸರ್ವರು, ಸರ್ವ ಜನಾಂಗದವರು ಸಮಾನರಾಗಿ ಬದುಕುವ ಅವಕಾಶ, ಹಕ್ಕು, ಎಲ್ಲವನ್ನು ನಮ್ಮ ಸಂವಿಧಾನ ನೀಡಿದೆ. ಸಂವಿಧಾನದ ಕಲಂ 19, ಕಲಂ 32 ರಂತ ಮಹತ್ವದ ಹಕ್ಕುಗಳನ್ನು ನಮಗೆ ನೀಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಸಮುದಾಯ, ವ್ಯವಸ್ಥೆಗೆ ಸೀಮಿತಗೊಳಿಸದೆ ಅವರ ಅಪಾರ ಕೊಡುಗೆಯನ್ನು ಸ್ಮರಿಸಿ, ಅವರ ಉದಾರತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇವತ್ತು ಡ್ರಗ್ಸ್ ಒಂದು ಶಾಪವಾಗಿ, ಅಭಿವೃದ್ಧಿ ವಿರೋಧಿಯಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಸಂಪೂರ್ಣವಾಗಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕಳೆದ 2008 ರಿಂದ ದೇಶದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಜೆಗಳೇ ಪ್ರಜಾಪ್ರಭುತ್ವದ ಜೀವಾಳ. ಇಂದಿನ ಲಿಂಗ ಸಮಾನತೆ, ಅವಕಾಶಗಳ ಸಮಾನತೆ, ಎಲ್ಲರಿಗೂ ಆಸ್ತಿ ಹಕ್ಕು ಲಭಿಸಿದ್ದು ಸಂವಿಧಾನ ನೀಡಿರುವ ಅವಕಾಶವಾಗಿದೆ. ಮಹಿಳೆಯರು ಸಂವಿಧಾನ ನೀಡಿರುವ ಅವಕಾಶಗಳನ್ನು ಬಳಸಿಕೊಂಡು, ಅಭಿವೃದ್ಧಿ ಹೊಂದಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವಕ್ಕೆ ಗಟ್ಟಿ ತಳಪಾಯ ಹಾಕಿದ್ದಾರೆ. ಎಲ್ಲರೂ ಪ್ರಜಾಪ್ರಭುತ್ವವನ್ನು ಗೌರವಿಸಿ, ಪ್ರಜಾಪ್ರಭುತ್ವದ ತತ್ತ್ವಗಳನ್ನು ಪಾಲಿಸಬೇಕು ಎಂದರು.

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಜಿಪಂ ಸಿಇಒ ಭುವನೇಶ ಪಾಟೀಲ, ಎಸ್.ಪಿ‌ ಗುಂಜನ್ ಆರ್ಯ ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net