

ಕುಂದಾಪುರ: ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ವತಿಯಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಂದಾಪುರ ಅಗ್ನಿಶಾಮಕ ಠಾಣೆಯ ಹವಾಲ್ದಾರ ಕೇಶವ ಅವರು ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಇಲಾಖೆಯ ಕಾರ್ಯಚಟುವಟಿಕಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಪ್ರಾತ್ಯಕ್ಷಿಕೆ ನೀಡಲಾಯಿತು.
ಅಗ್ನಿಶಾಮಕ ಠಾಣೆ ಸಹಾಯಕ ಅಧಿಕಾರಿಗಳಾದ ಕೆ.ಎನ್ ಹೊಸರತ್ತಿ, ಅಗ್ನಿಶಾಮಕ ಸಿಬ್ಬಂದಿ, ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ವನಿತಾ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಜನಯ್ಯ ವಂದಿಸಿದರು. ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.