ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ್‌

Denge Day
Published on

ಕಾರವಾರ: ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು.

ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ತನಾಡಿದರು.

ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮಾತನಾಡಿ, ಕಾರವಾರದ ಸ್ವಚ್ಚತೆಗೆ ಪೌರಕಾರ್ಮಿಕರು ಕಾರಣರಾಗಿದ್ದಾರೆ. ಆರೋಗ್ಯ ಸುರಕ್ಷಿತ ದೃಷ್ಠಿಯಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆ ತೆರಳಿ ಜನರಿಗೆ ಅರಿವನ್ನು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು ಎಂದರು.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನೀರಜ್ ಮಾತನಾಡಿ, ಡೆಂಗಿ ರೋಗವು ಸೊಳ್ಳೆಯಿಂದ ಬರುವ ರೋಗವಾಗಿದ್ದು, ಡೆಂಗಿ ಹರಡದಂತೆ ನಿಯಂತ್ರಸಲು ಈಗಾಗಲೇ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆರು ಜಾಗೃತಿ ಮೂಡಿಸುತ್ತಿದ್ದು, ಸೊಳ್ಳೆಯ ಸಂತಾನೋತ್ಪತ್ತಿ ತಾಣವಾದ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮತ್ತು ಮನೆಯ ಒಳಗೆ, ಡ್ರಂ, ತೋಟಿ ಮುಂತಾದವುಗಳಲ್ಲಿ ನೀರು ಕಲುಷಿತವಾಗದಂತೆ ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರಿಂದ ರೋಗಗಳು ಹರಡದಂತೆ ತಡೆಗಟ್ಟಬಹುದು ಎಂದರು.

ಜಿಲ್ಲಾ ಆಶ್ರಿತ ರೋಗನಿರ್ವಾಹಕ ಅಧಿಕಾರಿ ಡಾ. ರಮೇಶ ರಾವ್ ಮಾತನಾಡಿ, ಡೆಂಗ್ಯೂ ಒಂದು ಸಾಕ್ರಾಮಿಕ ರೋಗವಾಗಿದ್ದು , ಈ ವರ್ಷ ಇಲ್ಲಿಯವರೆಗೂ ಕಾರವಾರದಲ್ಲಿ ಯಾವುದೇ ಡೆಂಗ್ಯೂ ಪ್ರಕರಣಗಳು ಕಂಡುಬAದಿಲ್ಲ. ಮುಂದಿನ ದಿನಗಳಲ್ಲಿ ಡೆಂಗ್ಯೂ ರೋಗಕ್ಕೆ ಯಾರೂ ತುತ್ತಾಗದಂತೆ ಜಾಗೃತಿಯನ್ನು ಮೂಡಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ ಎಂ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಗುಫ್ ಸೈಯದ್,ನಗರಸಭೆ ಅಧಿಕಾರಿ, ಸಿಬ್ಬಂದಿಗಳು, ಪೌರ ಕಾರ್ಮಿಕರು, ಅರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net