ಕುಲಕರ್ಣಿ ಶಾಲೆಯಲ್ಲಿ ಡೆಂಘಿ ಜಾಗೃತಿ

Published on

ಹುಬ್ಬಳ್ಳಿ: ಇಲ್ಲಿಯ ಭಾವದೀಪ ಶಿಕ್ಷಣ ಸಂಸ್ಥೆಯ ವಿಮಲಾ ಕುಲಕರ್ಣಿ ಮೆಮೋರಿಯಲ್ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಡೆಂಘಿ ನಿಯಂತ್ರಣ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜೆಎಸ್ಎಸ್ ಕಾಲೇಜಿನ ಡಾ. ಮಹೇಶ ಆರ್.ಟಿ. ಅವರು ಮಾತನಾಡಿ, ಡೆಂಘಿ ಜ್ವರವು ಈಡೀಸ್ ಈಜಿಪ್ಟೆ ಎಂಬ ಸೊಳ್ಳೆ ಕಚ್ಚುವಿಕೆಯಿಂದ ಬರುತ್ತದೆ. ಅವುಗಳ ಸಂತಾನೋತ್ಪತ್ತಿ, ಜ್ವರದ ಲಕ್ಷಣಗಳು, ವಿಧಗಳು, ರೋಗ ಪತ್ತೆ ವಿಧಾನಗಳು ಹಾಗೂ ಚಿಕಿತ್ಸೆಗಳ ಕುರಿತು ವಿವರಿಸಿದರು.

ಮಕ್ಕಳು ಹಾಗೂ ಶಿಕ್ಷಕರಿಂದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಥಾ ಕೈಗೊಳ್ಳಲಾಯಿತು. ಶಾಲೆಯ ಪ್ರಾಂಶುಪಾಲ ಎಂ.ಕೆ. ಹಿರೇಮಠ, ಮುಖ್ಯೋಪಾಧ್ಯಾಯ ಅನಿತಾ ಬಾಗಲಕೋಟ್ ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net