

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಕಾಲದಲ್ಲಿ ಎಚ್ಚೆತ್ತು ಜನಜಾಗೃತಿ ಜತೆಗೆ ಮುಂಜಾಗ್ರತಾ ವಹಿಸಿದ ಜಿಲ್ಲಾ ಆರೋಗ್ಯ ಇಲಾಖೆಯ ಪ್ರಯತ್ನದಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೆ ಪ್ರಕರಣ ಸಂಪೂರ್ಣ ಹತೋಟಿಗೆ ಬಂದಿದೆ.
ಕಳೆದ ೆಬ್ರವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ 179 ಡೆಂಘೆ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲೇ ಇದು ಕನಿಷ್ಟ ಪ್ರಕರಣ ಎನ್ನಲಾಗಿದೆ. ಅದೃಷ್ಟವಶಾತ್ ಈ ಎಲ್ಲ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪ್ರಸ್ತುತ ಹತ್ತಿಪ್ಪತ್ತು ಸಕ್ರಿಯ ಪ್ರಕರಣಗಳಿದ್ದು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಪಂ ಮಟ್ಟದಿಂದ ಜಾಗೃತಿ: ರಾಜ್ಯದಲ್ಲಿ ಡೆಂಘೆ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಜಿಪಂ ಗ್ರಾಮ ಪಂಚಾಯಿತಿ ಮಟ್ಟದಿಂದಲೂ ಡೆಂಘೆ ಬಗ್ಗೆ ಹೆಚ್ಚೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮ ಆರಂಭಿಸಿತ್ತು. ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿ ಹಿರಿಯ ಅಧಿಕಾರಿಗಳು ಸರಣಿ ಸಭೆಗಳ ಮೂಲಕ ಡೆಂಘೆ ನಿಯಂತ್ರಣಕ್ಕೆ ಸಮರೋಪಾಧಿಯಲ್ಲಿ ಸಜ್ಜಾಗಿದ್ದರು. ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಸೊಳ್ಳೆಗಳಿಗೆ ಾಗಿಂಗ್ ಮಾಡುವ ಕೆಲಸ ಚುರುಕುಗೊಳಿಸಲಾಗಿತ್ತು. ಆರೋಗ್ಯ ಕಾರ್ಯಕರ್ತರೊಂದಿಗೆ ಮನೆ ಮನೆ ಭೇಟಿ, ಲಾರ್ವಾ ಸರ್ವೆ ಸೇರಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಂಡಿದ್ದರ ಲವಾಗಿ ಡೆಂಘೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಪ್ರಕರಣ ದಾಖಲಾಗಿಲ್ಲ: ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಸೋಂಕಿತರ ರಕ್ತ ತಪಾಸಣೆ ನಡೆಸಲಾಗಿದ್ದು, ಎಲ್ಲಿಯೂ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿಲ್ಲ ಎನ್ನಲಾಗಿದೆ. ಸಾಮಾನ್ಯವಾಗಿ ಡೆಂಘೆ ಸೋಂಕಿತರಲ್ಲಿ ಪ್ಲೇಟ್‌ಲೇಟ್‌ಗಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತದೆ. ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಅಂಥ ಗಂಭೀರತೆ ಕಾಣದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಜ್ವರದಂಥ ರೋಗ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ತಪಾಸಣೆ ನಡೆಸಿದ್ದ ಪರಿಣಾಮವಾಗಿ ಪ್ರಾಥಮಿಕ ಹಂತದಲ್ಲೇ ರೋಗ ಗುಣಪಡಿಸಲು ಸಾಧ್ಯವಾಗಿದೆ. ಸಾರ್ವಜನಿಕರಲ್ಲೂ ಹೆಚ್ಚಿನ ಜಾಗೃತಿ ಮೂಡಿದ್ದರ ಲವಾಗಿ ರೋಗ ನಿಯಂತ್ರಣ ಸಾಧ್ಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸೊಳ್ಳೆಗಳ ನಿಯಂತ್ರಣವೇ ಮದ್ದು: ಜನರು ವಾಸಿಸುವ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಅಲ್ಲದೆ ಸುತ್ತಮುತ್ತಲ ಜಾಗದಲ್ಲಿ ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿದರೆ ಡೆಂಘೆ, ಚಿಕೂನ್‌ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗ ಹರಡದಂತೆ ರಕ್ಷಣೆ ಪಡೆಯಬಹುದು. ಅಲ್ಲದೆ ಯಾವುದೇ ರೋಗ ಲಕ್ಷಣ ಕಂಡುಬಂದ ಕೂಡಲೇ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ವೈದ್ಯರನ್ನು ಭೇಟಿಯಾದರೆ ಪ್ರಾಥಮಿಕ ಹಂತದಲ್ಲೇ ರೋಗ ಗುಣಪಡಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾರಕ್ಕೊಮ್ಮೆ ಲಾರ್ವಾ ನಾಶ: ಜಿಲ್ಲೆಯ ನಾಲ್ಕೂ ತಾಲೂಕುಗಳ ವ್ಯಾಪ್ತಿಯಲ್ಲಿ ವಾರದಲ್ಲಿ ಒಂದು ದಿನ ಶುಕ್ರವಾರದಂದು ಲಾರ್ವಾ ನಾಶ ಎಂಬ ೋಷವಾಕ್ಯದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನೀರು ಸಂಗ್ರಹಣಾ ತೊಟ್ಟಿಗಳ ಪರಿಶೀಲನೆ, ಾಗಿಂಗ್ ಹಾಗೂ ಜಾಗೃತಿ ಕಾರ್ಯಕ್ರಮಗಳು ಗಮನ ಸೆಳೆದಿದ್ದವು. ಆಯಾ ತಾಲೂಕುಗಳ ಶಾಸಕರು ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿ ಹಿರಿಯ ಅಧಿಕಾರಿಗಳು ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೈಜೋಡಿಸಿದ್ದರು.
ಗ್ರಾಮಾಂತರ ಜಿಲ್ಲೆಯಲ್ಲಿ ಡೆಂಘೆ ಪ್ರಕರಣ ಸಂಪೂರ್ಣ ನಿಯಂತ್ರಣದಲ್ಲಿದೆ, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ ದಾಖಲಾಗಿಲ್ಲ. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳಿಂದಾಗಿ ರೋಗ ಉಲ್ಬಣಗೊಳ್ಳದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ೆಬ್ರವರಿಯಿಂದ ಇದುವರೆ ಜಿಲ್ಲೆಯಲ್ಲಿ 179 ಡೆಂಘೆ ಪ್ರಕರಣ ದಾಖಲಾಗಿದ್ದು ಎಲ್ಲರೂ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.
ಡಾ.ಸುನೀಲ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ