

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜ್ವರ ಬಂದಂತಹ ಸಂದರ್ಭಗಳಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ವೈದ್ಯರನ್ನು ಭೇಟಿ ಮಾಡಬೇಕು, ವೈದ್ಯರ ಸಲಹೆ, ಸೂಚನೆಗಳಿಲ್ಲದೇ ನೋವು ನಿವಾರಕ ಮಾತ್ರೆಗಳನ್ನು ಉಪಯೋಗಿಸಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್‌ಕುಮಾರ್ ಹೇಳಿದರು.
ಹೊಸಕೋಟೆ ನಗರದ ವರದಾಪುರ ವಾರ್ಡ್‌ನಲ್ಲಿ ಡೆಂಘೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಶ್ರಮಿಸುತ್ತಿದ್ದಾರೆ ಆರೋಗ್ಯ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಸಾಂಕ್ರಾಮಿಕ ರೋಗ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ದೊಡ್ಡಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಇದನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು ಎಂದು ಹೇಳಿದರು. ನೀರಿನ ಟ್ಯಾಂಕ್‌ಗಳು ಮತ್ತು ನೀರಿನ ಪರಿಕರಗಳನ್ನು ಭದ್ರವಾಗಿ ಮುಚ್ಚಬೇಕು,
ನಿರುಪಯುಕ್ತ ಪರಿಕರಗಳು, ಟೈರು, ತೆಂಗಿನ ಚಿಪ್ಪುಗಳನ್ನು ಸೂಕ್ತ ವಿಲೇವಾರಿ ಮಾಡಬೇಕು, ವಾರಕ್ಕೊಮ್ಮೆ ನೀರಿನ ಸಂಗ್ರಹಗಳನ್ನು ಖಾಲಿ ಮಾಡಿ, ಚೆನ್ನಾಗಿ ಉಜ್ಜಿ ಮತ್ತು ಒಣಗಿಸಿ ನೀರನ್ನು ತುಂಬಿ ಭದ್ರವಾಗಿ ಮುಚ್ಚಬೇಕು ಎಂದು ತಿಳಿಸಿದರು. ಕಳೆದ ಒಂದುವರೆ ತಿಂಗಳಿಂದ ಡೆಂಘೆ ಹಾಗೂ ಚಿಕೂನ್‌ಗುನ್ಯಾ ರೋಗದ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಬೇಕು ಎಂದರು.
ಸೊಳ್ಳೆಪರದೆ ಬಳಸಿ:
ಮನೆಗಳಲ್ಲಿ ತೆರೆದ ಪರಿಕರಗಳಲ್ಲಿ ನೀರನ್ನು ಸಂಗ್ರಹಿಸುವುದು ಹಾಗೂ ಅವುಗಳನ್ನು ಸ್ವಚ್ಚಗೊಳಿಸದೇ ಇರುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ ಎಂದರು. ಹಿರಿಯ ನಾಗರಿಕರು ಮತ್ತು ಮಕ್ಕಳು ಹಗಲಿನ ವೇಳೆಯಲ್ಲಿ ಸೊಳ್ಳೆಪರದೆಗಳನ್ನು ಉಪಯೋಗಿಸದೆ ಮಲಗಬಾರದು ಎಂದು ಡಿಎಚ್‌ಒ ಸಲಹೆ ನೀಡಿದರು. ಹೋಟೆಲ್‌ಗಳಲ್ಲಿರುವ ನೀರಿನ ಟ್ಯಾಂಕ್‌ಗಳಿಗೆ ಲಾರ್ವಾಹಾರಿ ಮೀನುಗಳನ್ನು ಬಿಡಲು ಕ್ರಮಕೈಗೊಳ್ಳಲಾಗಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ರೋಗದ ಲಕ್ಷಣ ಕಂಡುಬಂದರೆ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮುಂಜಾಗ್ರತಾ ಕ್ರಮಕೈಗೊಳ್ಳಬೇಕು:
ಹಗಲಿನ ವೇಳೆಯಲ್ಲಿ ಮನೆಗಳಲ್ಲಿ ಮಲಗಿದ್ದಾಗ ಸೊಳ್ಳೆ ಪರದೆಗಳನ್ನು ಬಳಸಬೇಕು,