ಡೆಂೆ ಅನಾಹುತ ಸಂಭವಿಸಿದರೆ ಅಧಿಕಾರಿಗಳ ತಲೆದಂಡ

09 skpp 1
Published on

ಸಕಲೇಶಪುರ: ಡೆಂೆ ತಡೆಗೆ ಯುದ್ಧೋಪಾದಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.


ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಡೆಂೆ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ಹ್ಯಾಂಡ್‌ಬಿಲ್ ಹಂಚಿದರೆ ರೋಗ ತಡೆ ಸಾಧ್ಯವಿಲ್ಲ. ಗ್ರಾಪಂ ಅಧಿಕಾರಿಗಳು ರೋಗ ಹರಡಬಹುದಾದ ಸ್ಥಳಗಳ ಪತ್ತೆ ಮಾಡಿ ಸ್ವಚ್ಛಗೊಳಿಸಿದರೆ ಸಾಧ್ಯವಾದಷ್ಟು ತಡೆಗಟ್ಟಬಹುದು. ರೋಗ ಹತೋಟಿಗೆ ಬರುವವರೆಗೆ ಕಚೇರಿ ಬಿಟ್ಟು ಹೊರಗೆ ಕೆಲಸ ಮಾಡಬೇಕು. ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಅನಾಹುತ ನಡೆದರೆ ಸಂಬಂಧಪಟ್ಟ ಅಧಿಕಾರಿಗಳ ತಲೆದಂಡ ನಿಶ್ಚಿತ. ಆದ್ದರಿಂದ ರೋಗ ನಿಯಂತ್ರಣಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಹೇಳಿದರು.


ಗ್ರಾಪಂಗಳ ವ್ಯಾಪ್ತಿಯಲ್ಲಿ ಕೋಳಿ ಮಾಂಸದ ಅಂಗಡಿಗಳ ಮಾಲೀಕರು ಎಲ್ಲಿ ಬೇಕೆಂದರಲ್ಲಿ ಮಾಂಸದ ತ್ಯಾಜ್ಯ ಬಿಸಾಡುತ್ತಿದ್ದು ಇದರಿಂದ ಡೆಂೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಾಳ್ಳುಪೇಟೆ ಗ್ರಾಪಂ ಕಸವಿಲೇವಾರಿ ಘಟಕ ಗಬ್ಬೆದ್ದು ನಾರುತ್ತಿದ್ದು ಇಲ್ಲಿಗೆ ಹೋಗುವ ಪ್ರತಿಯೊಬ್ಬರಿಗೂ ಡೆಂೆ ಬರುತ್ತಿದೆ. ತಾಲೂಕಿನ ಹಲವಾರು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿರುವ ಕಸ ವಿಲೇವಾರಿ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಗ್ರಾಪಂಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕಗಳು ಇರುವುದಿಲ್ಲ. ಕೂಡಲೇ ಇದನ್ನು ತಾಪಂ ಅಧಿಕಾರಿಗಳ ಗಮನಕ್ಕೆ ತಂದು ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದರು.


ಡೆಂೆ ನಿಯಂತ್ರಣಕ್ಕಾಗಿ ಕೆರೆಗಳಿಗೆ ಸೊಳ್ಳೆಗಳ ಲಾರ್ವಾಗಳನ್ನು ತಿನ್ನುವ ಗ್ಯಾಬೋಷಿಯ ಹಾಗೂ ಗಪ್ಪಿಸ್ ಮೀನುಗಳನ್ನು ಬಿಡಲಾಗಿದೆ. ಇದೇ ಮಾದರಿಯಲ್ಲಿ ಎಲ್ಲ ಗ್ರಾಪಂಗಳ ಕೆರೆಗಳಿಗೂ ಬಿಡಬೇಕು ಎಂದು ಹೇಳಿದರು.


ಬಿರಡಹಳ್ಳಿ ಗ್ರಾಪಂ ಅಧ್ಯಕ್ಷ ಎಸ್.ಡಿ. ಸತೀಶ್ ಮಾತನಾಡಿ, ಪಟ್ಟಣದಲ್ಲಿ ತ್ಯಾಜ್ಯ ರಾಶಿ ಸಾಕಷ್ಟಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬಸ್ ನಿಲ್ದಾಣದ ಶೌಚಗೃಹದ ನೀರು ಬಿಡಲಾಗುತ್ತಿದೆ. ಇದಲ್ಲದೆ ಹಲವೆಡೆ ಅಶುಚಿತ್ವ ತಾಂಡವವಾಡುತ್ತಿದೆ. ಇದರಿಂದಾಗಿ ತಾಲೂಕಿನಲ್ಲಿ ಡೆಂೆ ಹತೋಟಿಗೆ ಬಾರದಾಗಿದೆ. ದಯವಿಟ್ಟು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.


ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಶ್ ಮಾತನಾಡಿ, ತಾಲೂಕಿನಲ್ಲಿರುವ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಕೇಂದ್ರಗಳಿವೆ. ಜ್ವರ ಕಂಡು ಬಂದಲ್ಲಿ ವಿಳಂಬ ಮಾಡದೆ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಪಂ ಕೇಂದ್ರಗಳಲ್ಲಿ ಆಸ್ಪತ್ರೆಗಳಿದ್ದರೂ ಸಿಬ್ಬಂದಿ ಕೊರತೆಯಿಂದ ಬಹುತೇಕ ಎಲ್ಲ ಕಟ್ಟಡಗಳು ಪಾಳು ಬಿದ್ದಿವೆ. ಸದ್ಯ ಕೊರತೆ ಇರುವ ಸಿಬ್ಬಂದಿ ನೇಮಕವಾಗಬೇಕಿದೆ ಎಂದರು.
ಉಪವಿಭಾಗಾಧಿಕಾರಿ ಎಂ.ಕೆ.ಶ್ರುತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಆಡಳಿತ) ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ರಾಮಕೃಷ್ಣ, ಸಹಾಯಕ ನಿರ್ದೇಶಕರಾದ ಆದಿತ್ಯ, ಹರೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net