ಡೆಂಘೆ ಬಗ್ಗೆ ಮುಂಜಾಗ್ರತೆ ಅವಶ್ಯ

madure dengu
ದೊಡ್ಡಬಳ್ಳಾಪುರ ತಾಲೂಕು ಕನಸವಾಡಿ ಕಾಲನಿಯಲ್ಲಿ ಡೆಂಘೆ ನಿಯಂತ್ರಣ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮಯ್ಯ,ಗ್ರಾಪಂ ಕಾರ್ಯದರ್ಶಿ ನಾಗರಾಜ್, ಪ್ರಕಾಶ್, ಗ್ರಂಥಪಾಲನ ಪೂರ್ಣಚಂದ್ರ ಮತ್ತಿತರರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಮಧುರೆ
ಎಲ್ಲಡೆ ಡೆಂಘೆ ಸಾಂಕ್ರಾಮಿಕ ರೋಗ ತೀವ್ರಗೊಂಡಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ ಎಂದು ಕನಸವಾಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮಯ್ಯ ತಿಳಿಸಿದರು.
ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಕನಸವಾಡಿ ಕಾಲನಿಯಲ್ಲಿ ಶಿಕ್ಷಣ ಫೌಂಡೇಶನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡೆಂಘೆ ಜಾಗೃತಿ ಜಾಥಾದಲ್ಲಿ ಮಾತನಾಡಿದರು. ಡೆಂಘೆ ಮಾರಣಾಂತಿಕವಾಗಿದ್ದು ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಪ್ರಾಣಹಾನಿ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ರೋಗಲಕ್ಷಣ ಕಂಡುಬಂದರೆ ಕೂಡಲೆ ವೈದ್ಯರನ್ನು ಭೇಟಿ ಮಾಡಬೇಕು ಎಂದು ಮನವಿ ಮಾಡಿದರು.
ಸ್ವಚ್ಛತೆ ಕಾಪಾಡಿಕೊಳ್ಳಿ: ಗ್ರಾಮಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಸೊಳ್ಳೆ ಉತ್ಪತ್ತಿಗೆ ಅವಕಾಶ ಮಾಡಿಕೊಡಬಾರದು ಎಂದು ಗ್ರಾಪಂ ಕಾರ್ಯದರ್ಶಿ ನಾಗರಾಜ್ ಹೇಳಿದರು. ನಿಂತ ನೀರಿನಲ್ಲಿ ಡೆಂಘೆ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ ಆದ್ದರಿಂದ ಮನೆಯ ಸುತ್ತಮುತ್ತ ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ನೀರು ಶೇಕರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಿರಬೇಕು ಎಂದು ಸಲಹೆ ನೀಡಿದರು.
ಜಾಗೃತರಾಗಿ: ತಾಲೂಕಿನಲ್ಲಿ ಕಳೆದ ಒಂದುವರೆ ತಿಂಗಳಿಂದ ಡೆಂಘೆ ಹಾಗೂ ಚಿಕೂನ್‌ಗುನ್ಯಾ ರೋಗದ ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿ ಹಲವು ಕ್ರಮಗಳ ಮೂಲಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ ಎಂದು ಶಿಕ್ಷಣ ಫೌಂಡೇಶನ್ ಬೆಂಗಳೂರು ಗ್ರಾಮಾಂತರ ಸಂಯೋಜಕ ಗಂಗಾಧರ್ ಹೇಳಿದರು. ಸಾರ್ವಜನಿಕರು ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಹಕರಿಸುವ ಮೂಲಕ ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net