ಎಲ್ಲ ಆಸ್ಪತ್ರೆಗಳಲ್ಲೂ ಡೆಂೆಗೆ ಚಿಕಿತ್ಸೆ ಲಭ್ಯ

WhatsApp Image 2024-05-30 at 4.02.01 PM (2)
Published on

ಆಲೂರು: ಜನರ ಸಹಭಾಗಿತ್ವದಿಂದ ಡೆಂೆ ನಿಯಂತ್ರಣ ಸಾಧ್ಯ ಎಂದು ತಹಸೀಲ್ದಾರ್ ನಂದಕುಮಾರ್ ಹೇಳಿದರು.


ತಾಲೂಕು ಆಸ್ಪತ್ರೆಯಲ್ಲಿ ಸಮಗ್ರ ರೋಗಗಳ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಡೆಂೆ ದಿನ ಪ್ರಯುಕ್ತ ಶುಕ್ರವಾರ ಏರ್ಪಡಿಸಲಾಗಿದ್ದ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿ, ಆರಂಭಿಕ ಹಂತದಲ್ಲೇ ಡೆಂೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಎಲ್ಲ ಆಸ್ಪತ್ರೆಗಳಲ್ಲೂ ಡೆಂೆಗೆ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.


ತಾಲೂಕು ಆರೋಗ್ಯಾಧಿಕಾರಿ ಡಾ.ನಿಸಾರ್ ಫಾತಿಮಾ ಮಾತನಾಡಿ, ತಾಲೂಕಿನಲ್ಲಿ ಈವರೆಗೂ 11 ಡೆಂೆ, 1 ಚಿಕೂನ್‌ಗುನ್ಯಾ ಪ್ರಕರಣ ಕಂಡು ಬಂದಿದೆ. ತಾಲೂಕಿನ ಎಲ್ಲೆಡೆ ಲಾರ್ವಾ ಸಮೀಕ್ಷೆಯನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಆಲೂರು ಪಟ್ಟಣದಲ್ಲಿ ಪ್ರತಿ ತಿಂಗಳ 1ನೇ ಮತ್ತು 3ನೇ ಶುಕ್ರವಾರ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಾ ದಿನಗಳಂದು ಪಟ್ಟಣ ಪಂಚಾಯಿತಿಯಿಂದ ಮಧ್ಯಾಹ್ನದ ಉಪಾಹಾರ ಒದಗಿಸುವಂತೆ ಸಭೆಯಲ್ಲಿ ಹಾಜರಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಕೋರಿದರು.


ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಂದ 3 ಸಾವಿರ ಕರಪತ್ರಗಳನ್ನು ಮುದ್ರಿಸಿಕೊಡುವಂತೆ ಸ್ಥಳದಲ್ಲಿ ಹಾಜರಿದ್ದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.


ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣದಡಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಪರೀಕ್ಷಿಸಿ ಸ್ವಚ್ಛತೆ ಬಗ್ಗೆ ಗಮನಹರಿಸಲು ಕ್ರಮ ಕೈಗೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದರು.


ತಾಲೂಕು ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net