

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ, ಕಡಿರುದ್ಯಾವರ ಗ್ರಾಮ ಪಂಚಾಯಿತಿ, ಡಿಕೆಆರ್‌ಡಿಎಸ್ ಬೆಳ್ತಂಗಡಿ, ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಡೆಂಘೆ ಜ್ವರ ಬಗ್ಗೆ ಜಾಗೃತಿ ಕಾರ್ಯಕ್ರಮ ಕಡಿರುದ್ಯಾವರ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.
ಗ್ರಾಪಂ ಅಧ್ಯಕ್ಷೆ ನೇತ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜೆಸಿಂತಾ ಡಿಸೋಜ ಡೆಂಘೆ ನಿಯಂತ್ರಣ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್. ಸಂಸ್ಥೆ ನಿರ್ದೇಶಕ ಫಾ.ಬಿನೋಯಿ ಎ.ಜೆ. ಕಾರ್ಯಕ್ರಮ ಮಹತ್ವದ ಬಗ್ಗೆ ತಿಳಿಸಿದರು. ಆರೋಗ್ಯ ನಿರೀಕ್ಷಕ ಸಲೀಂ ಮಂಗಳೂರು ಮತ್ತು ನೋಡಲ್ ಕೀಟ ತಜ್ಞ ಚೇತನ್ ಮಂಗಳೂರು ಡೆಂೆ ಜ್ವರ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.
ಮಾನಿನಿ ಮಹಿಳಾ ರಾಜ್ಯ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಅಧ್ಯಕ್ಷೆ ಮಂಜುಳಾ ಜೋನ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಉಪಸ್ಥಿತರಿದ್ದರು. ಸ್ನೇಹ ಜ್ಯೋತಿ ಒಕ್ಕೂಟ ಸದಸ್ಯೆ ಸಂಧ್ಯಾ ಡೆಂೆ ಜ್ವರ ಜಾಗೃತಿ ಮೂಡಿಸುವ ಹಾಡು ಹಾಡಿದರು.
ಕೀಟ ತಜ್ಞೆ ಡಾ.ರೇಷ್ಮಾ, ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿ ವರ್ಗ, ಜಿಲ್ಲಾ ನಿಯಂತ್ರಣಾಧಿಕಾರಿ ಕಚೇರಿ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು, ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗದವರು ಮತ್ತು ಸ್ನೇಹ ಜ್ಯೋತಿ ತಾಲೂಕು ಒಕ್ಕೂಟ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.
ಪರಿಸರ ದಿನಾಚರಣೆ ಅಂಗವಾಗಿ ಗ್ರಾಪಂ ವಠಾರದಲ್ಲಿ ಹಣ್ಣಿನ ಗಿಡ ನೆಡಲಾಯಿತು. ಸೊಳ್ಳೆ ಉತ್ಪತ್ತಿ ನಾಶದ ಬಗ್ಗೆ ಮನೆ ಮನೆ ಭೇಟಿ ಮೂಲಕ ಮಾಹಿತಿ ನೀಡಿ ಕರಪತ್ರ ಹಂಚಲಾಯಿತು. ಸಮುದಾಯ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಆರೋಗ್ಯ ನಿರೀಕ್ಷಕರು ರಕ್ಷಿತ್ ವಂದಿಸಿದರು.