ಡೆಂಘೆ ಜಾಗೃತಿ ಅಭಿಯಾನಕ್ಕೆ ಚಾಲನೆ

Lad New
Published on

ಹುಬ್ಬಳ್ಳಿ : ಡೆಂಘ ಕುರಿತು ಆಟೋಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಲ್ಲಿನ ಮಹಾನಗರ ಪಾಲಿಕೆ ಮುಖ್ಯ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ಪಾಲಿಕೆಯ ಎಲ್ಲ ವಾರ್ಡ್​ಗಳಲ್ಲಿ 50 ಆಟೋಗಳ ಮೂಲಕ ಡೆಂಘ ಕುರಿತು ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಶಾಸಲರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಮೇಯರ್ ರಾಮಣ್ಣ ಬಡಿಗೇರ್, ಉಪ ಮೇಯರ್ ದುರ್ಗಮ್ಮ ಬಿಜವಾಡ, ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಪೌರ ಕಾರ್ವಿುಕರು ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net