ಡೆಂೆ ಜಾಗೃತಿ ಅಗತ್ಯ

ಡೆಂೆ ಜಾಗೃತಿ ಅಗತ್ಯ
Published on

ಚನ್ನರಾಯಪಟ್ಟಣ: ಡೆಂೆ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಅಧಿಕಾರಿ ಡಾ. ಜಿ.ಎಸ್.ನಾಗಪ್ಪ ಹೇಳಿದರು.

ಪಟ್ಟಣದ ಹೊಸ ಸಾರಿಗೆ ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಡೆಂೆ ಸೋಲಿಸಲು ಹೆಜ್ಜೆಗಳು, ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದಡಿ ಅರಿವು ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೇಸಿಗೆಯ ಕೊನೆಯಲ್ಲಿ ಮತ್ತು ಮಳೆಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಡೆಂೆ ಪ್ರಕರಣಗಳು ವರದಿಯಾಗುತ್ತವೆ. ಸೊಳ್ಳೆ ಕಡಿತದಿಂದ ಡೆಂೆ ಹರಡುತ್ತದೆ. ರಕ್ತನಾಳಗಳಿಗೆ ಈ ವೈರಸ್ ಹಾನಿಯುಂಟು ಮಾಡುತ್ತದೆ. ಜತೆಗೆ ರಕ್ತಕಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿ ಅಂಗಾಂಗ ವೈಫಲ್ಯ ಮತ್ತು ಕೆಲವೊಮ್ಮೆ ಜೀವಕ್ಕೂ ಸಂಚಾಕಾರ ಬರಬಹುದು. ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಂಡು ನೋವು ಉಂಟಾಗುವುದು, ಕೈಕಾಲುಗಳಲ್ಲಿ ಸೆಳೆತ, ನೋವು, ಆಯಾಸ ರೋಗ ಲಕ್ಷಣಗಳಾಗಿವೆ ಎಂದರು.

ಪ್ರತಿಯೊಬ್ಬರೂ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನೀರು ಶೇಖರಣೆಯಾಗುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಸೊಳ್ಳೆ ನಿವಾರಕ ಬಳಕೆಯೂ ಸೂಕ್ತವಾಗಿದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎ.ಆರ್.ಅನಿತಾ ಮಾತನಾಡಿ, ಡೆಂೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಸ್ತುತ ಮಳೆಗಾಲ ಪ್ರಾರಂಭವಾದ ಕಾರಣ ಶುದ್ಧ ನೀರಿನಲ್ಲಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ನಂತರ ಮನುಷ್ಯರಿಗೆ ಕಚ್ಚುವುದರಿಂದ ಈ ಖಾಯಿಲೆ ಹರಡುತ್ತದೆ. ಈ ರೋಗದ ಲಕ್ಷಣಗಳು ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಲ್ಲೆ ಆಕಾರದ ಕೆಂಪು ಗಂಧೆಗಳು, ಕಪ್ಪು ಮಲವಿಸರ್ಜನೆ, ವಸಡುಗಳಲ್ಲಿ ರಕ್ತಸ್ರಾವ ಇಂತಹ ಲಕ್ಷಣಗಳಿದ್ದರೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ರಕ್ತ ಪರೀಕ್ಷೆ ಮಾಡಿಸಿ, ಖಚಿತ ಪಟ್ಟರೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಕೆಎಸ್‌ಆರ್‌ಟಿಸಿ ಚನ್ನರಾಯಪಟ್ಟಣ ಘಟಕದ ಘಟಕ ಪ್ರಭಾರ ವ್ಯವಸ್ಥಾಪಕ ಎ.ಎ.ಬಸವರಾಜು ಹಸಿರು ಬಾವುಟ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಸಂಚಾರಿ ನಿಯಂತ್ರಕ ಕೆ.ಎನ್.ನಾಗೇಶ್, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ನಿಂಗೇಗೌಡ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎಂ.ಪುಷ್ಪಾವತಿ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕ ಶಿವಲಿಂಗಯ್ಯ, ಉಮೇಶ್, ಅರುಣ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net