

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಡೆಂಗೆ, ಮಲೇರಿಯಾ ರೋಗ ತಡೆಗಟ್ಟುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಧಿಕಾರಿ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆ ಹೆಚ್ಚಾಗಿದೆ. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗೆ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಡೆಂೆ ನಿಯಂತ್ರಣ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲನಿಗಳಿಗೆ, ಜನನಿಬಿಡ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಛಾವಣಿ, ನಿರುಪಯುಕ್ತ ವಸ್ತು, ಟಬ್ಬು, ಬಕೆಟ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.
ಧರ್ಮಸ್ಥಳ ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ. ಲೆಕ್ಕ ಸಹಾಯಕರಾದ ಪ್ರಮೀಳಾ, ಚಂದ್ರಾವತಿ, ವೀಣಾ, ಗ್ರಂಥಪಾಲಕ ಮಂಜುಳಾ, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.