ಸ್ವಚ್ಛತೆಯಿಂದ ಮಾತ್ರ ಡೆಂಗೆ ನಿಯಂತ್ರಣ ಸಾಧ್ಯ

nrp health
ಎನ್.ಆರ್.ಪುರ ತಾಲೂಕು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂೆ ವಿರೋಧಿ ಮಾಸಾಚರಣೆ ಪ್ರಯುಕ್ತ ನಡೆದ ರಸ ಪ್ರಶ್ನೆ ಮಾಹಿತಿ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಡಾ. ಸುರೇಶ್, ಎಂ.ಪಿ.ಮನು, ದರ್ಶನ್, ಅನಸೂಯಾ ಇತರರಿದ್ದರು.
Published on

ಎನ್.ಆರ್.ಪುರ: ಡೆಂೆ 3 ಹಂತಗಳಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರಥಮ ಹಂತದಲ್ಲಿ ಜ್ವರ ಕಾಣಿಸುತ್ತದೆ. ಎರಡನೇ ಹಂತದಲ್ಲಿ ರಕ್ತಸ್ರಾವ , ಮೂರನೇ ಹಂತದಲ್ಲಿ ಡೆಂೆ ಶಾಕ್ ಸಿಂಡ್ರೋಮ್ ಕಾಣಿಸುತ್ತದೆ. ಈ ಕಾಯಿಲೆಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣದಿಂದ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುರೇಶ್ ತಿಳಿಸಿದರು.

ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಡೆದ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿ, ಡೆಂೆ ಜ್ವರಕ್ಕೆ ಮೂಳೆ ಮುರಿತ ರೋಗ ಎಂಬುದಾಗಿ ಕರೆಯುತ್ತಾರೆ ಎಂದು ಹೇಳಿದರು.
ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಎಂ.ಪಿ.ಮನು ಮಾತನಾಡಿ, ಜೇಸಿಯಿಂದ ತಾಲೂಕಿನ ಆರೋಗ್ಯಕ್ಕೆ ಪೂರಕ ಕಾರ್ಯಕ್ರಮ ನಡೆಸುತ್ತಿದ್ದೇವೆ. ರಸಪ್ರಶ್ನೆ ಕಾರ್ಯಕ್ರಮದಿಂದ ಡೆಂೆ ನಿಯಂತ್ರಣ ಮಾಡಲು ಬೇಕಾಗಿರುವ ಮಾಹಿತಿ ಸಿಕ್ಕಿದೆ. ವಿದ್ಯಾರ್ಥಿಗಳು, ಪಾಲಕರು ಡೆಂೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಮೆಣಸೂರು ಗ್ರಾಪಂ ಸದಸ್ಯ ಡಿ.ಆರ್.ಶ್ರೀನಾಥ್ ಮಾತನಾಡಿ, ಡೆಂೆ ನಿಯಂತ್ರಣ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು. ಆರೋಗ್ಯ ಇಲಾಖೆ ನಿರ್ದೇಶನದಂತೆ ಸ್ವಚ್ಛತೆಗೆ ಗಮನ ನೀಡಬೇಕು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಬಿಂದು ಸತೀಶ್ ಮಾತನಾಡಿ, ಡೆಂೆ ಬಂದವರ ಕುಟುಂಬದ ಸಂಕಷ್ಟಗಳನ್ನು ನೋಡಿದಾಗ ಜ್ವರ ಬಾರದಂತೆ ಎಚ್ಚರಿಕೆ ವಹಿಸುವುದು ಸೂಕ್ತ ಎಂದರು.
ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಪೂರ್ಣಿಮಾ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ. ಶಾಲೆಯಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.
ಜೇಸಿ ಅಧ್ಯಕ್ಷ ಎಂ.ಪಿ.ಮನು, ವಲಯಾಧಿಕಾರಿ ಚರಣರಾಜ್ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು.
ಗ್ರಾಪಂ ಸದಸ್ಯೆ ರಚಿತಾ ರಮೇಶ್, ಜೇಸಿ ಸದಸ್ಯ ಆದರ್ಶ, ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಪವನ್‌ಕರ್, ಶಿಕ್ಷಕರಾದ ಅನಸೂಯಾ, ಮಹಾತ್ಮ ಗಾಂಧಿ, ಶಾಲಿನಿ, ರಾಮ್‌ಮೋಹನ್, ಆರೋಗ್ಯ ಇಲಾಖೆ ಆಪ್ತ ಸಮಾಲೋಚಕ ಸುಹಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net