ರಾಜ್ಯದಲ್ಲಿ ಡೆಂಘೆ ಪ್ರಕರಣ 6,390ಕ್ಕೆ ಏರಿಕೆ

Dengue
Published on

ಬೆಂಗಳೂರು: ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಬುಧವಾರ 13 ಡೆಂಘೆ ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 6,390ಕ್ಕೆ ಏರಿಕೆಯಾಗಿದ್ದು, ಈವರೆಗೂ 6 ಮಂದಿ ಮೃತಪಟ್ಟಿದ್ದಾರೆ. ಹೆಚ್ಚುತ್ತಿರುವ ಡೆಂಘೆ ಪ್ರಕರಣಗಳನ್ನು ನಿಯಂತ್ರಿಸಲು ಖಾಸಗಿ ಆಸ್ಪತ್ರೆಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು.

ಈ ಸಂದರ್ಭವನ್ನು ಲಾಭ ಮಾಡಿಕೊಳ್ಳಲು ಬಳಸಿಕೊಳ್ಳಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಡೆಂಘೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ಜತೆ ಕೈಜೋಡಿಸಬೇಕು. ಕಾಲ ಕಾಲಕ್ಕೆ ಹೊರಡಿಸುವ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಶಂಕಿತ ಡೆಂಘೆ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net