

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 549 ಡೆಂಘೆ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,268ಕ್ಕೆ ಏರಿಕೆಯಾಗಿದೆ. ಈವರೆಗೂ 10 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
24 ಗಂಟೆಗಳಲ್ಲಿ 4,046 ಡೆಂಘೆ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 221, ಮಂಡ್ಯ 41, ಹಾಸನ 38, ಹಾವೇರಿ 28, ತುಮಕೂರು 27, ಬೀದರ್ 25, ಚಿಕ್ಕಬಳ್ಳಾಪುರ 24, ದಾವಣಗೆರೆ 23, ಬೆಳಗಾವಿ 20 ಸೇರಿ 549 ಮಂದಿ ಡೆಂಘೆ ಸೋಂಕಿಗೆ ಒಳಗಾಗಿದ್ದಾರೆ. ಒಟ್ಟು ಸೋಂಕಿತರಲ್ಲಿ 2,674 ಮಂದಿ ಮನೆ ಆರೈಕೆಗೆ ಒಳಗಾಗಿದ್ದು, 668 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 16 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿಯಲ್ಲಿ ತಿಳಿಸಿದೆ.