ಮೈಸೂರಿನಲ್ಲಿ ಡೆಂಘೆ ನಿಯಂತ್ರಣ: ಡಿಎಚ್ಒ ಡಾ.ಕುಮಾರಸ್ವಾಮಿ

mysore
Published on

ಮೈಸೂರು: ಡೆಂಘೆ ನಿಯಂತ್ರಣಕ್ಕೆ ಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ತಿಳಿಸಿದರು.


ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಡೆಂೆ ಜ್ವರ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ. ಇಡೀ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಮೈಸೂರಿನಲ್ಲಿ ಡೆಂೆ ರೋಗಿಗಳು ತ್ವರಿತಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದರು.


ಜಿಲ್ಲೆಯಲ್ಲಿ ಔಷಧಗಳ ಕೊರತೆ ಇಲ್ಲ. ಪ್ರಾಥಮಿಕ ಅರೋಗ್ಯ ಕೇಂದ್ರ ಸೇರಿದಂತೆ ಎಲ್ಲ ಕಡೆಯೂ ಸೂಕ್ತ ಕ್ರಮ ವಹಿಸಲಾಗಿದೆ ಎಂದರು.


ಜು.12ರಿಂದ ಶುರುವಾಗಲಿರುವ ಆಷಾಢ ಶುಕ್ರವಾರದ ಪ್ರಯುಕ್ತ ಲಕ್ಷಾಂತರ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ. ಹಲವು ಕಡೆ ಪ್ರಸಾದ ವಿತರಣೆ ಕೂಡ ಇರುತ್ತದೆ. ಆದ್ದರಿಂದ ನಿರ್ದಿಷ್ಟ ಸ್ಥಳಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net