ಡೆಂಘೆ ಹೆಚ್ಚಳ: ಆಸ್ಪತ್ರೆಗೆ ಸಂಸದ ಯದುವೀರ ಭೇಟಿ

mysore
Published on

ಮೈಸೂರು: ಜಿಲ್ಲೆಯಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪರಿಶೀಲಿಸಿದರು.


ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿಯ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯಿಂದ ಮಾಹಿತಿ ಪಡೆದರು. ಆಸ್ಪತ್ರೆಯ ವಾರ್ಡ್‌ಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.


ನಗರದಲ್ಲಿ ಡೆಂೆ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿವೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ಪರಿಶೀಲನೆ ಮಾಡಿದ್ದು, ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಡೆಂೆ ಜ್ವರ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಂಸದ ಯದುವೀರ ಹೇಳಿದರು.


ಡೆಂೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯದಲ್ಲೇ ಅಧಿಕಾರಿಗಳ ಸಭೆ ನಡೆಸಲಾಗುವುದು. ಜಿಲ್ಲಾಸ್ಪತ್ರೆಗೆ ಅಗತ್ಯ ಸಲಕರಣೆಗಳ ಕೊರತೆ ಇದೆ. ಇದರ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.


ಮೈಸೂರು- ಕೊಡಗು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಸಚಿವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಮೈಸೂರು- ಕೊಡಗು ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಮಾಜಿ ಶಾಸಕ ಎಲ್.ನಾಗೇಂದ್ರ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net