

ಮಂಡ್ಯ: ಸ್ವಚ್ಛತೆಯನ್ನು ಕಾಪಾಡಿ ಹಾಗೂ ಸೊಳ್ಳೆಗಳ ನಿಯಂತ್ರಿಸುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಮೂಲಕ ಡೆಂೆಯಿಂದ ದೂರವಿರಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಇಲಾಖೆಯಿಂದ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಂಗಳವಾರ ಆಯೋಜಿಸಿದ್ದ ಮಲೇರಿಯಾ ಹಾಗೂ ಡೆಂೆ ನಿಯಂತ್ರಣ ಕುರಿತು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಈ ಹಿಂದೆ ಜಿಲ್ಲೆಯಲ್ಲಿ ಡೆಂೆ ಪ್ರಕರಣ ಹೆಚ್ಚು ಕಂಡು ಬರುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಜನರಲ್ಲಿ ಉಂಟಾಗುತ್ತಿರುವ ಜಾಗೃತಿಯಾಗಿದೆ. ಸಾರ್ವಜನಿಕರು ಆರೋಗ್ಯ ಇಲಾಖೆ ತಿಳಿಸುವ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಕೈ ಜೋಡಿಸಿ. ಕಳೆದ ವರ್ಷದಲ್ಲಿ ಡೆಂೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಕಳೆದ ವರ್ಷ 297 ಡೆಂೆ ಪ್ರಕರಣ ಹಾಗೂ ಈ ಬಾರಿ 27 ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣದಂತೆ ಡೆಂೆ ಪ್ರಕರಣಗಳು ಕೂಡ ಕಡಿಮೆಯಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಮಾತನಾಡಿ, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ. ಸೊಳ್ಳೆಯ ಕಡಿತದಿಂದ ಡೆಂೆ ಹರಡುತ್ತದೆ. ಸೊಳ್ಳೆ ಪರದೆಯನ್ನು ಬಳಸಿ ಎಂದರು.
ಮಾನಸಿಕ ರೋಗ ತಜ್ಞ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೇಣುಗೋಪಾಲ್, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಡಿಟಿಸಿ ಡಾ.ಮಮತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಸೋಮಶೇಖರ್ ಇತರರಿದ್ದರು.