ಡೆಂಘೆ ಜಾಗೃತಿ ಪೋಸ್ಟರ್ ಬಿಡುಗಡೆ

22-GPT-1
Published on

ಚಾಮರಾಜನಗರ: ಡೆಂಘೆ ವ್ಯಾಪಿಸುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ಗಿರಿದಾಸ್ ಹೇಳಿದರು.


ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಂತರ ಇಲಾಖೆಯಳ ಸಮನ್ವಯ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿ ವರ್ಷ ದೇಶದ ವಿವಿದೆಡೆ ಸಾವಿರಾರು ಜನರು ಡೆಂಘೆನಿಂದ ಬಳಲುತ್ತಿದ್ದು ಇದನ್ನು ತಡೆಗಟ್ಟಲು ಸರ್ಕಾರ ಕಾರ್ಯಕ್ರಮ ಆಯೋಜಿಸಿ ಜನತೆಯಲ್ಲಿ ಜಾಗ್ರತೆ ಮೂಡಿಸುತ್ತಿದೆ. ಸಾರ್ವಜನಿಕರು ತಮ್ಮ ಮನೆಯ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆವಹಿಸುವ ಮೂಲಕ ಸೊಳ್ಳೆಗಳ ನಿರ್ಮೂಲನೆ ಮಾಡುವುದರಿಂದ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣ ಸಾಧ್ಯವಾಗಲಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಡೆಂಘೆ ಜಾಗೃತಿ ಮೂಡಿಸುವ ಪೋಸ್ಟರುಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ತಹಸೀಲ್ದಾರ್ ರವಿಶಂಕರ್, ಬಿಇಒ ಶಿವಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net