

ಮಂಗಳೂರು : ದ.ಕ ಜಿಲ್ಲಾ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ವತಿಯಿಂದ 49ನೇ ರಾಜ್ಯ ಹಾಗೂ 8ನೇ ಅಂತರ್ ರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16ರಂದು ನಡೆಯಲಿದೆ.
ಡಿ.15ರಂದು ಬೆಳಗ್ಗೆ 10ಕ್ಕೆ ಮಾಹೆಯ ವೈಸ್ ಚಾನ್ಸಲರ್ ಲೆಫ್ಟಿನೆಂಟ್ ಜನರಲ್ ಡಾ. ವೆಂಕಟೇಶ್ ಸಮಾವೇಶ ಉದ್ಘಾಟಿಸಲಿದ್ದಾರೆ. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಡಿ.16ರಂದು ನಡೆಯುವ ಬೆಳಗ್ಗೆ 9.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ , ಐಡಿಎ ಅಧ್ಯಕ್ಷ ಡಾ.ರಾಜೀವ್ ಕುಮಾರ್ ಚುಗ್, ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ , ರಾಜ್ಯ ಘಟಕದ ಅಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜುನೈದ್ ಅಹ್ಮದ್ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ. 2 ಸಾವಿರಕ್ಕೂ ಅಧಿಕ ದಂತ ವೈದ್ಯ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.