ಶಿಬಿರದಿಂದ ಸಮಾಜದ ಒಳಿತಿಗೆ ಪ್ರಯತ್ನ : ಡಾ.ಸುಮಂತ್ ಹೇಳಿಕೆ

New Project (5)
Published on

ಕಡಬ: ಗ್ರಾಮೀಣ ಪ್ರದೇಶದ ಈ ಶಾಲೆಯು ದಂತ ಚಿಕಿತ್ಸಾ ಶಿಬಿರದ ಮೂಲಕ ಸಮಾಜದ ಒಳಿತಿಗಾಗಿ ಪ್ರಯತ್ನಿಸಿರುವುದು ಶ್ಲಾಘನೀಯ ಎಂದು ಕೆವಿಜಿ ದಂತ ಮಹಾವಿದ್ಯಾಲಯದ ವೈದ್ಯಾಧಿಕಾರಿ ಡಾ.ಸುಮಂತ್ ಹೇಳಿದರು.

ಪುಣ್ಚಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಸರಣಿ ಕಾರ್ಯಕ್ರಮದಡಿಯಲ್ಲಿ ಶತಮಾನೋತ್ಸವ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಸಹಯೋಗದಲ್ಲಿ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್, ಸವಣೂರು ಸೇವಾ ಭಾರತಿ ಸಹಕಾರದೊಂದಿಗೆ ಆಯೋಜಿಸಲಾದ ದಂತ ಚಿಕಿತ್ಸಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸುಳ್ಯ ಕೆವಿಜಿ ಮಹಾವಿದ್ಯಾಲಯದ ಸಮುದಾಯ ಅಭಿವೃದ್ಧಿ ಅಧಿಕಾರಿ ಜಯಂತ್ ಮಾತನಾಡಿದರು. ಡಾ.ಅನಘಾ ದಂತ ಸಮಸ್ಯೆ, ಚಿಕಿತ್ಸೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಎಸ್‌ಡಿಎಂಸಿ ಸದಸ್ಯ ಸುಹಾಸ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಸವಣೂರು ಗ್ರಾಪಂ ಸದಸ್ಯರಾದ ಗಿರಿಶಂಕರ ಸುಲಾಯ, ಬಾಬು ಜರಿನಾರು ಉಪಸ್ಥಿತರಿದ್ದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶೋಭಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net