ಇಲಾಖೆಯಿಂದ ಕ್ರೀಡಾಪಟುಗಳಿಗೆ ಪ್ರೋತ್ಸಾಹ

23 KAMPLI 01
ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ದಸರಾ ಕ್ರೀಡಾಕೂಟ ಹಿನ್ನೆಲೆಯಲ್ಲಿ ವಾಲಿಬಾಲ್ ಸ್ಪರ್ಧೆ ನಡೆಯಿತು.
Published on

ಕಂಪ್ಲಿ: ಯುವಜನತೆ ನಿತ್ಯ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಆರೋಗ್ಯ ಹಾಗೂ ದೈಹಿಕ ಸದೃಢಗೊಳ್ಳುವಲ್ಲಿ ನಿಗಾ ವಹಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಹೇಳಿದರು.

ಎಮ್ಮಿಗನೂರು ಗ್ರಾಮದ ಪಬ್ಲಿಕ್ ಶಾಲೆ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ದಸರಾ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಎಲ್ಲ ವಯೋಮಾನದವರಲ್ಲಿ ಅರ್ಹತೆ ಹೊಂದಿದ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಲು ದಸರಾ ಕ್ರೀಡಾಕೂಟ ಹಮ್ಮಿಕೊಂಡಿದೆ. ಈ ಕ್ರೀಡಾಕೂಟದಲ್ಲಿ ವಾಲಿಬಾಲ್, ಕೋಕೋ, ಕಬಡ್ಡಿ, ಥ್ರೋಬಾಲ್, ಯೋಗ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆಯಲಿವೆ. ಕ್ರೀಡೆಗಳಲ್ಲಿ ವಿಜೇತರಾಗುವ ಅರ್ಹ ಆಟಗಾರ, ತಂಡವನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗುವುದು ಎಂದರು. ತರಬೇತುದಾರ ಜಾಕೀರ್, ಪ್ರಮುಖರಾದ ಮಸೂದ್, ರತಿಕಾಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net