ವಿದ್ಯಾರ್ಥಿಗಳಿಗೆ ಸಂಶೋಧನಾ ಜ್ಞಾನ ಅಗತ್ಯ, ಕಾರ್ಯಾಗಾರ ಉದ್ಘಾಟಿಸಿ ವಿವಿ ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥ ಪ್ರೊ. ಪುಟ್ಟಣ್ಣ ಕೆ. ಸಲಹೆ

samshodane
ವಿವಿ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳ ಕುರಿತ ಕಾರ್ಯಾಗಾರವನ್ನು ವಿವಿ ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥ ಪ್ರೊ. ಪುಟ್ಟಣ್ಣ ಕೆ ಉದ್ಘಾಟಿಸಿದರು. ಪ್ರಾಂಶುಪಾಲೆ ಡಾ. ಅನಸೂಯ ರೈ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ. ಎ. ಸಿದ್ಧಿಕ್ ಸೇರಿದಂತೆ ಹಲವರು ಇದ್ದರು.
Published on

ಮಂಗಳೂರು: ಉನ್ನತ ಮಟ್ಟದ ಶೈಕ್ಷಣಿಕ ಜ್ಞಾನ ಪಡೆಯಲು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನಗಳ ಕುರಿತ ಜ್ಞಾನ ಅತ್ಯಗತ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಪ್ರೊ. ಪುಟ್ಟಣ್ಣ ಕೆ. ಹೇಳಿದರು.

ವಿಶ್ವವಿದ್ಯಾಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಹಳೇ ವಿದ್ಯಾರ್ಥಿಗಳ ಸಂಘದ ಜಂಟಿ ಸಹಯೋಗದಲ್ಲಿ ಸಂಶೋಧನಾ ವಿಧಾನಗಳ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಮಾತನಾಡಿ, ಭವಿಷ್ಯದಲ್ಲಿ ಸಂಶೋಧನೆ ಕುರಿತ ಜ್ಞಾನದ ಅಗತ್ಯವನ್ನು ಮನಗಂಡು ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಆಸಕ್ತಿಯ ಕ್ಷೇತ್ರದಲ್ಲಿ ನಿಮ್ಮದೇ ಆದ ಛಾಪು ಮೂಡಿಸಿದರೆ ಮುಂದಿನ ಜೀವನ ಸುಲಭ ಎಂದರು.

ಬೀರಿಯ ಎಐಎಂಐಟಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಾಗೇಂದ್ರ ಎಸ್, ಯೆನಪೋಯ (ಡೀಮ್ಡ್) ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ.ನಿಯಾಝ್ ಪಣಕಜೆ, ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜಿನ ಉಪನ್ಯಾಸಕ ಡಾ. ಅಭಿನಂದನ್ ಕುಲಾಲ್ ಸಂಶೋಧನೆಯ ವಿವಿಧ ಮಜಲುಗಳ ಕುರಿತು ಮಾತನಾಡಿದರು. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ನಾಯಕ್, ಸಂಘದ ಖಜಾಂಚಿ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ. ಎ. ಸಿದ್ಧಿಕ್ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಶೀತಲ್ ಕೆ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಎ.ಎಸ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net