

ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ಕೇಂದ್ರ ಸಮಿತಿ ವತಿಯಿಂದ ಅಧ್ಯಾಪಕರು, ಮುಖ್ಯಶಿಕ್ಷಕರಾಗಿ ಭಡ್ತಿ ಹೊಂದುವ 2024ರ ಕೆ.ಎಸ್.ಆರ್ ಮತ್ತು ಕೆ.ಇ.ಆರ್ ಪರೀಕ್ಷಾ ತರಗತಿಯ ಉದ್ಘಾಟನೆ ಕುಂಬಳೆ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಭಾನುವಾರ ನಡೆಯಿತು.
ಸತತ ಐದು ವರ್ಷಗಳಿಂದ ಕನ್ನಡ ಅಧ್ಯಾಪಕ ಸಂಘಟನೆ ಕನ್ನಡ ಮಾಧ್ಯಮ ಶಿಕ್ಷಕರಿಗೆ ಉಚಿತವಾಗಿ ತರಗತಿಗಳನ್ನು ನೀಡುತ್ತಾ ಬಂದಿದೆ.
ನಿವೃತ್ತ ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಮಹಾಲಿಂಗೇಶ್ವರ ರಾಜ್ ಡಿ.ಯಂ ಉದ್ಘಾಟಿಸಿದರು. ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪಿ.ಬಿ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷ ಜಯರಾಮ ಸಿ.ಎಚ್ ಶುಭಾಶಂಸನೆಗೈದರು. ಕುಂಬಳೆ ಉಪಜಿಲ್ಲಾ ಕಾರ್ಯದರ್ಶಿ ನವಪ್ರಸಾದ್, ಮಂಜೇಶ್ವರ ಉಪಜಿಲ್ಲಾ ಘಟಕದ ಶ್ರೀರಾಮ ಕೆದುಕೋಡಿ, ಶಿಕ್ಷಕ ಸನತ್ ಕುಮಾರ್ ಉಪಸ್ಥಿತರಿದ್ದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿದರು. ಕೇಂದ್ರ ಸಮಿತಿ ಸದಸ್ಯ ನವೀನ್ ಕುಮಾರ್ ಪಿ. ವಂದಿಸಿದರು. ಕೇಂದ್ರ ಸಮಿತಿ ಕೋಶಾಧಿಕಾರಿ ಶರತ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿದರು.