ನುಸುಳುಕೋರರನ್ನು ಗಡಿಪಾರುಮಾಡಿ

Deport the infiltrators.
ಜಿಲ್ಲೆಯಲ್ಲಿರುವ ಅಕ್ರಮ ಪಾಕ್ ಪಜೆಗಳನ್ನು ಗುರುತಿಸುವ ಮೂಲಕ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು. ಗುರುಲಿಂಗಪ್ಪ ಅಂಗಡಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯಲ್ಲಿರುವ ಅಕ್ರಮ ಪಾಕಿಸ್ತಾನಿ ನುಸುಳುಕೋರರನ್ನು ತುರ್ತಾಗಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಭಾರತೀಯ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಸೇರಿದ ನೂರಾರು ಕಾರ್ಯಕರ್ತರು ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕುವಂತೆ ಘೋಷಣೆ ಮೊಳಗಿಸಿದರು. ನಂತರ ಬೃಹತ್ ಮೆರಣಿಗೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಇತ್ತೀಚೆಗೆ ನಡೆದ ಪಹಲ್ಗಾಮ್ ನರಮೇಧದಲ್ಲಿ ಪಾಕಿಸ್ತಾನದ ಉಗ್ರರು 26 ಜನ ಅಮಾಯಕ ಭಾರತೀಯ ಪ್ರಜೆಗಳನ್ನು ಧರ್ಮ ಕೇಳಿ ಗುಂಡಿಕ್ಕಿ ಕೊಂದಿದ್ದಾರೆ. ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದ್ದೆ. ಇಂತಹ ಬರ್ಬರ ಹತ್ಯಾಕಾಂಡವನ್ನು ಜಗತ್ತಿನ ಎಲ್ಲ ದೊಡ್ಡ ಶಕ್ತಿಶಾಲಿ ರಾಷ್ಟ್ರಗಳು ಖಂಡಿಸುವ ಜತೆಗೆ ಭಾರತದ ಜೊತೆ ನಿಲ್ಲುವುದಾಗಿ ಘೋಷಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ದುಷ್ಕೃತ್ಯಕ್ಕೆ ಕಾರಣರಾದವರನ್ನು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಹುಡುಕಿ ಕಠಿಣ ಶಿಕ್ಷಗೆ ಗುರಿ ಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದರು.

ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ, ಈ ದುರ್ಘಟನೆಯ ನಂತರದಲ್ಲಿ ಕೇಂದ್ರ ಸರ್ಕಾರವು ನೀಚ ಪಾಕಿಸ್ತಾನದ ಜತೆಗೆ ಹಲವು ರಾಜತಾಂತ್ರಿಕ ಒಪ್ಪಂದಗಳಿಗೆ ಬ್ರೇಕ್ ಹಾಕಿದೆ. ಅಲ್ಲದೆ, ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಬರುವ ವೀಸಾ ನಿಲ್ಲಿಸಿದೆ ಹಾಗೂ ನಿಯಮಿತ ಸಮಯದಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನಿ ಪ್ರಜೆಗಳು ಹಿಂತಿರುಗುವಂತೆ ಆಜ್ಞೆ ಹೊರಡಿಸಿದೆ. ಆ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ, ಅಂಥವರನ್ನು ವಿಳಂಬ ಮಾಡದೇ ಕೂಡಲೇ ಎಲ್ಲ ಕಾನೂನು ಬದ್ಧ ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ವಿಜುಗೌಡ ಪಾಟೀಲ, ಸುರೇಶ ಬಿರಾದಾರ, ಉಮೇಶ ಕೊಳಕೂರ, ಗೋಪಾಲ ಘಟಕಾಂಬಳೆ, ಸಂಜೀವ ಐಹೊಳೆ, ಮಹೇಂದ್ರ ನಾಯಕ, ಮಳನಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶಾಳ, ಭೀಮಶಂಕರ ಹದನೂರ, ವಿವೇಕಾನಂದ ಡಬ್ಬಿ, ಚಿದಾನಂದ ಚಲವಾದಿ, ರವಿಕಾಂತ ಬಗಲಿ, ರಾಜು ಬಿರಾದಾರ, ವಿಜಯ ಜೋಶಿ, ಬಾಲರಾಜ ರೆಡ್ಡಿ, ಸಿದ್ಧಗೊಂಡ ಬಿರಾದಾರ, ಸ್ವಪ್ಪಾ ಕಣ್ಮುಚನಾಳ, ಎಂ.ಎಸ್. ಕರಡಿ, ರಾಹುಲ್ ಜಾಧವ, ಸಂದೀಪ ಪಾಟೀಲ, ಪ್ರೇಮಾನಂದ ಬಿರಾದಾರ, ವಿಠಲ ಹೊಸಪೇಟೆ, ಮಲ್ಲಿಕಾರ್ಜುನ ಕಿವುಡೆ, ರಾಜೇಂದ್ರ ವಾಲಿ, ಸಂಗಮೇಶ ಹೌದೆ, ಬಾಬು ಶಿರಶ್ಯಾಡ, ಸಂತೋಷ ಕುರದಡ್ಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net