

ಮಡಿಕೇರಿ: ಶಿಕ್ಷಕರು ಮಕ್ಕಳಲ್ಲಿ ಉತ್ತಮ ಕಲಿಕೆಯೊಂದಿಗೆ ಜೀವನದಲ್ಲಿ ಯಶಸ್ಸುಗಳಿಸಿ ಉತ್ತಮ ಭವಿ?್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶರವರು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಕರೆ ನೀಡಿದರು.
ನಗರದ ಸಂತ ಮೈಕಲರ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಪ್ರೌಢಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ೨೦೨೨-೨೩ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ೬೦ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಲು ಕಾರಣರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಶಾಲಾ ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದ ಮಾದರಿಯಲ್ಲಿ ಜೀವನದ ಪರೀಕ್ಷೆಯಲ್ಲಿ ಕೂಡ ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ಅವರಲ್ಲಿ ಕ್ರಿಯಾಶೀಲತೆ ಹಾಗೂ ಆತ್ಮಸ್ಥೈರ್ಯ ಬೆಳೆಸಲು ಶಿಕ್ಷಕರು ವಿಶೇ? ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ತಮ್ಮ ಸ್ವಂತ ಬಲದಿಂದ ಸ್ವತಂತ್ರವಾಗಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಶಾಲಾ ಮಕ್ಕಳಲ್ಲಿ ಸ್ವಚ್ಛತೆ ಹಾಗೂ ಪರಿಸರ ಪ್ರಜ್ಞೆ ಬೆಳೆಸಲು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಲೆಗಳಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕಳೆದ ವ?ರ್ ಕೋವಿಡ್ ಸಂದರ್ಭದಲ್ಲಿ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ರಾಜ್ಯ ಮಟ್ಟದಲ್ಲಿ ೫ನೇ ಸ್ಥಾನದೊಳಗೆ ಬರುವಂತೆ ಶಿಕ್ಷಕರು ಶ್ರಮಿಸಬೇಕು ಎಂದರು.
ಕಳೆದ ವ?ರ್ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶಾಲೆಗಳನ್ನು ದತ್ತು ಪಡೆದುಕೊಂಡು ಶಾಲಾ ಭೇಟಿ ನೀಡುವ ಮೂಲಕ ಮಕ್ಕಳಲ್ಲಿ ಪರೀಕ್ಷೆಗೆ ಕಲಿಕಾ ಪ್ರೇರಣೆ ನಡೆಸಿದ ಕಾರಣ ಹೆಚ್ಚಿನ ಫಲಿತಾಂಶ ಪಡೆಯಲು ಸಾಧ್ಯವಾಯಿತು ಎಂದರು.
ಡಿಡಿಪಿಐ ವೇದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಶಾಲೆಗಳಲ್ಲಿ ಕೈಗೊಂಡಿರುವ ಶೈಕ್ಷಣಿಕ ಕ್ರಮಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಶ್ರೀಶೈಲ ಬೀಳಗಿ, ಕೆ.ವಿ.ಸುರೇಶ್, ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃ?್ಣಪ್ಪ, ಸಂತ ಮೈಕಲ್ಲರ ವಿದ್ಯಾಸಂಸ್ಥೆಯ ಕರೆಸ್ಲಾಂಡೆಂಟ್ ರೆ.ಫಾದರ್ ನವೀನ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ವನಜಾಕ್ಷಿ, ಪಿ.ಕೆ.ನಳಿನಿ, ಜಿ.ಎಂ.ಹೇಮಂತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ್ ನಾಯಕ್ ಇದ್ದರು. ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.