ಪೂರ್ವ ಸಿದ್ಧತಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

25 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಲ್ಲಿ ಮಂಗಳವಾರದಿಂದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ರಾಜ್ಯಮಟ್ಟದ ಪರೀಕ್ಷೆಗಳು ಆರಂಭವಾಗಿದ್ದು, ಜಿಲ್ಲಾಧಿಕಾರಿ ದಿವ್ಯ ಪ್ರಭು ನಗರದ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.

ಪ್ರಜಂಟೇಶನ್​ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ಕೇಂದ್ರಕ್ಕೆ ತೆರಳಿ ಕೊಠಡಿ, ಸಿಸಿಟಿವಿ ವ್ಯವಸ್ಥೆ ಪರಿಶೀಲಿಸಿದರು. ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಕಠಿಣತೆ, ವಿದ್ಯಾರ್ಥಿಗಳ ಸ್ಪಂದನೆ, ಬರವಣೆಗೆ ನೋಡಿ ಮಾಹಿತಿ ಪಡೆದರು.

ಕೇಂದ್ರದಲ್ಲಿ ನಿರ್ಭಯವಾಗಿ, ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆಯುತ್ತಿರುವುದನ್ನು ವಿವಿಧ ಕೊಠಡಿಗಳಿಗೆ ತೆರಳಿ ಖಚಿತ ಪಡಿಸಿಕೊಂಡರು. ನಂತರ ಗಾಂಧಿನಗರ ಸೇರಿ ಇತರ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರೌಢಶಾಲೆ ಮುಖ್ಯೋಪಾಧ್ಯಯಿನಿ ಸಿಸ್ಟರ್​ ಶಾಲ್ಲಿ ಬಿ.ಎಸ್​, ಎನ್​.ಎನ್​.ಭಟ್ಟ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net