ಎಡದಂಡೆ ಕಾಲುವೆಗೆ 21ರಿಂದ ನೀರು

RAJUGOUDA
Published on

ಕೊಡೇಕಲ್: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಮುಖ್ಯ ಕಾಲುವೆಗಳಿಗೆ 21ರಿಂದ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ ಎಂದು ಶಾಸಕ ನರಸಿಂಹನಾಯಕ ಹೇಳಿದರು.

ಈಗಾಗಲೇ ರಾಜ್ಯದಲ್ಲಿ ಕರೊನಾ ಹೆಚ್ಚುತ್ತಿರುವ ಹಿನ್ನೆಲೆ ಐಸಿಸಿ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಈ ಭಾಗಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿತ್ತು, ಅಲ್ಲದೆ ಸೋಮವಾರ ವಿಜಯಪುರದಲ್ಲಿ ಕಾರಜೋಳ ಅವರನ್ನು ಭೇಟಿ ಮಾಡಿ ಮನವಿ ಮಾಡಿದಾಗ ತಕ್ಷಣವೇ ಸ್ಪಂದಿಸಿದ ಸಚಿವರು ಕಡತವನ್ನು ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಇರುವವರೆಗೂ ಸತತವಾಗಿ ಚಾಲುಬಂದಿ ಕ್ರಮ ಕೈಗೊಳ್ಳದೇ ಇರುವಂತೆ ತಿಳಿಸಿದರು. ಅಲ್ಲದೇ ಮುಂಗಾರು ಹಂಗಾಮಿಗೆ ಅಗತ್ಯವೆನಿಸಿದಲ್ಲಿ ಮಾತ್ರ ಸಭೆ ನಡೆಸಿ ಮುಂದಿನ ತೀಮರ್ಾನ ಪ್ರಕಟಿಸುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net