ರಾ.ಹ. ದೇಶಪಾಂಡೆ ಪ್ರಶಸ್ತಿ ಪ್ರದಾನ

Vidyavardhaka sangha
Published on

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ 134ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಜು. 22ರಂದು ಸಂಜೆ 5.30ಕ್ಕೆ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ ಪ್ರದಾನ ಹಾಗೂ ಧಾರವಾಡ ಹಿರಿಮೆ ಹೆಚ್ಚಿಸಿದ ಚೇತನಗಳ ಸ್ಮರಣೆ, ರಾ.ಹ. ದೇ. ಸ್ಮರಣೆ ಏರ್ಪಡಿಸಲಾಗಿದೆ.

ಬೀದರನ ಭಾಲ್ಕಿಯ ಹಿರೇಮಠ ಸಂಸ್ಥಾನದ ಪರ ಡಾ. ಬಸವಲಿಂಗ ಪಟ್ಟದ್ದೇವರು ಪ್ರಶಸ್ತಿ ಸ್ವೀಕರಿಸುವರು. ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು.

ಲಕ್ಷ್ಮೇಶ್ವರದ ಮುಕ್ತಾ ಕುಲಕರ್ಣಿ ಅವರಿಂದ ಸುಗಮ ಸಂಗೀತ, ಗಿರಿಜಾ ಶೆಕ್ಕಿ ಹಾಗೂ ತಂಡದಿಂದ ಜಾನಪದ ಹಾಡು ಮತ್ತು ಡಾ. ಗುರುಬಸವ ಮಹಾಮನೆ ಅವರಿಂದ ವಯೋಲಿನ್ ಕಾರ್ಯಕ್ರಮ ಜರುಗಲಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net