ಗಡುವು ಮುಗಿದರೂ ಹೆದ್ದಾರಿ ಕೆಲಸ ಅಪೂರ್ಣ

Published on

ಉಪ್ಪಿನಂಗಡಿ: ನೆಕ್ಕಿಲಾಡಿ-ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯು ನಿಧಾನ ಗತಿಯಲ್ಲಿ ಸಾಗುತ್ತಿದ್ದು, ಇದನ್ನು ಖಂಡಿಸಿ 34 ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರ 8ರಂದು ಆದರ್ಶ ನಗರದಲ್ಲಿ ರಸ್ತೆ ತಡೆ ನಡೆಸಿ ಉಗ್ರ ಪ್ರತಿಭಟನೆಗೆ ಮುಂದಾಗಿದೆ.

ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಕಳೆದ ಡಿ.2ರಂದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆದರ್ಶ ನಗರದಲ್ಲಿ ರಸ್ತೆ ತಡೆ ನಡೆಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿತ್ತು. ಆಗ ಸ್ಥಳಕ್ಕಾಗಮಿಸಿದ ಪಿಡಬ್ಲುೃಡಿ ಇಲಾಖೆಯ ಇಂಜಿನಿಯರ್ 15 ದಿನದ ಗಡುವು ಕೇಳಿದ್ದರು. ಅದಕ್ಕೆ ಒಪ್ಪಿಕೊಂಡ ಪ್ರತಿಭಟನಕಾರರು ಪ್ರತಿಭಟನೆ ಹಿಂಪಡೆದಿದ್ದರು.

ಆದರೆ ಬಳಿಕ ಮಳೆ ಬಂದ ಕಾರಣ ಅಂತಿಮ ಗಡುವು ಕಳೆದರೂ ಸುಮ್ಮನಿದ್ದರು. ಆದರೆ ಈಗ ಒಂದು ತಿಂಗಳು ಕಳೆದರೂ ಹೆದ್ದಾರಿಗೆ ಡಾಂಬರು ಹಾಕುವ ಪ್ರಕ್ರಿಯೆ ನಡೆಸಿಲ್ಲ. ಹೀಗಾಗಿ ಪ್ರತಿಭಟನೆ ನಡೆಸಲಾಗುವುದು ಎಂದು 34 ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net