ಕಾಡಾನೆಗಳ ಹಾವಳಿಗೆ ಬೆಳೆ ನಾಶ

25sunti01
ಕಾಡಾನೆ ಹಾವಳಿಯಿಂದ ನಾಶಗೊಂಡಿರುವ ತೆಂಗಿನ ಮರ.
Published on

ಸುಂಟಿಕೊಪ್ಪ: ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಂದಲೆ ಮುಂದುವರೆದಿದ್ದು, ಫಸಲುಭರಿತ ಬೆಳೆ ತಿಂದು, ತುಳಿದು ನಾಶಪಡಿಸುತ್ತಿವೆ.
7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು-ಉಪ್ಪುತೋಡು ನಿವಾಸಿ, ಜೈ ಜವಾನ್ ಜೈ ಕಿಸಾನ್ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ.ಶಿವನ್ ತೋಟಕ್ಕೆ ಮೂರು ದಿನಗಳಿಂದ ನಿರಂತರವಾಗಿ ಕಾಡಾನೆಯೊಂದು ದಾಳಿ ಇಡುತ್ತಾ ತೆಂಗು, ಕಾಫಿ ಗಿಡಗಳನ್ನು ತುಳಿದು ನಾಶಪಡಿಸುತ್ತಿದೆ\

ಸಮೀಪದ ಕಾನ್ ಬೈಲ್ ಬೈಚನಹಳ್ಳಿಯ ನೆಟ್ಲಿ ‘ಬಿ’ ತೋಟ, ಕೆಳಪನ್ಯ ತೋಟದಲ್ಲೂ ಎರಡು ಕಾಡಾನೆಗಳು ಕಾಣಿಸಿಕೊಳ್ಳುತ್ತಿದೆ. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಮತ್ತು ದಾಂದಲೆ ಮಿತಿಮೀರಿದ್ದು, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net