

ಪಿರಿಯಾಪಟ್ಟಣ: ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಪಾಲಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಮೈಸೂರಿನ ಸೇಂಟ್ ಥಾಮಸ್ ಎಜುಕೇಷನ್ ಸೊಸೈಟಿಯ ಜಿ.ಬಿ.ಥಾಮಸ್ ಹೇಳಿದರು.
ಪಟ್ಟಣದ ಪುಷ್ಪ ಆಂಗ್ಲ ಮಾಧ್ಯಮ ಶಾಲೆಯ ಸಿಬಿಎಸ್‌ಸಿ ವಿಭಾಗದ ಕ್ರೀಡಾ ಮತ್ತು ಸಾಂಸ್ಕೃತಿಕ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅವಿಭಕ್ತ ಕುಟುಂಬದ ಸಂಸ್ಕೃತಿ ಕಾಣೆಯಾಗುತ್ತಿರುವುದು ಅತ್ಯಂತ ಬೇಸರದ ವಿಷಯವಾಗಿದೆ. ಹಿರಿಯರನ್ನು ಗೌರವಿಸುವುದು, ಪ್ರೀತಿಸುವುದನ್ನು ಮಕ್ಕಳಿಗೆ ಕಲಿಸಬೇಕು. ಪ್ರತಿ ಮಗು ತನ್ನದೇ ಆದ ವಿಶೇಷತೆಯನ್ನು ಹೊಂದಿದ್ದು ಅವರಲ್ಲಿರುವ ಪ್ರತಿಭೆಯನ್ನು ಪೋಷಿಸುವ ಹೊಣೆಗಾರಿಕೆ ನಿಮ್ಮದಾಗಿದೆ ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಥಾಮಸ್ ಮಾತನಾಡಿದರು. ಪುಷ್ಪ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲ ಡಾ.ಫಿಲಿಪ್, ವ್ಯವಸ್ಥಾಪಕ ಡಿನ್ಸಿ ಆಂತೋನಿ ಮಾತನಾಡಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.