ಕಾಡಾನೆ ದಾಳಿಗೆ ಮುಸುಕಿನ ಜೋಳ ನಾಶ

19 HANUR 3
ಮಾರಳ್ಳಿ ಗ್ರಾಮದ ತಿಮ್ಮಯ್ಯ ಎಂಬುವರ ಜಮೀನಿನಲ್ಲಿ ಮುಸುಕಿನ ಜೋಳವನ್ನು ಕಾಡಾನೆ ನಾಶಪಡಿಸಿರುವುದು.
Published on

ಹನೂರು: ತಾಲೂಕಿನ ಮಾರಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಜಮೀನೊಂದಕ್ಕೆ ಕಾಡಾನೆ ಲಗ್ಗೆ ಇಟ್ಟು ಮುಸುಕಿನ ಜೋಳವನ್ನು ನಾಶಪಡಿಸಿದೆ.

ಗ್ರಾಮದ ತಿಮ್ಮಯ್ಯ ಎಂಬುವವರು ಹೊರವಲಯದಲ್ಲಿರುವ ಜಮೀನಿನಲ್ಲಿ ಮುಸುಕಿನ ಜೋಳ ಬೆಳೆದಿದ್ದರು. ತೆನೆಗಳು ಕಟಾವಿನ ಹಂತಕ್ಕೆ ಬಂದಿತ್ತು. ಆದರೆ ಕಾಡಾನೆ ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸಿದೆ. ಇದರಿಂದ ನಷ್ಟವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಜಮೀನಿಗೆ ಭೇಟಿ ನೀಡುವಂತೆ ರೈತ ತಿಮ್ಮಯ್ಯ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net