

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ
ಆಹಾರ ಪದ್ಧತಿ, ದೈನಂದಿನ ಒತ್ತಡ, ವ್ಯಾಯಾಮದ ಕೊರತೆ ಮೊದಲಾದ ಕಾರಣಗಳಿಂದಾಗಿ ಮಾನವನ ಆರೋಗ್ಯ ಅಧಃಪತನದತ್ತ ಸಾಗುತ್ತಿದ್ದು, ರಕ್ತದೊತ್ತಡ, ಮಧುಮೇಹ ಕಾಯಿಲೆ ಹೆಚ್ಚಾಗುತ್ತಿದೆ. ದೇಹದ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆಯಲ್ಲಿ ಸುಲಭವಾದ ಉತ್ತಮ ಆಯಾಮಗಳಿವೆ ಎಂದು ಮಂಗಳೂರಿನ ಶಾರದಾ ಯೋಗ ಮತ್ತು ನ್ಯಾಚುರೋಪತಿ ವೈದ್ಯಕೀಯ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಭಾವನಾ ಹೇಳಿದರು.
ಕಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾವು- ಈಶ್ವರಮಂಗಲ ಗ್ರಾಮ ಸಮಿತಿ, ಕಾವು ಲಯನ್ಸ್ ಕ್ಲಬ್ ಮತ್ತು ಮಂಗಳೂರಿನ ತಲಪಾಡಿ ದೇವಿನಗರದ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಕಾಲೇಜಿನ ಸಹಯೋಗದಲ್ಲಿ ಕಾವು ಸರ್ಕಾರಿ ಶಾಲೆಯಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿದರು.
ಕಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ, ಲಯನ್ಸ್ ಕ್ಲಬ್‌ನ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಕಾವು ಹೇಮನಾಥ ಶೆಟ್ಟಿ ಶಿಬಿರ ಉದ್ಘಾಟಿಸಿದರು.
ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ್ ರೈ ಗುತ್ತು ಅಧ್ಯಕ್ಷತೆ ವಹಿಸಿದ್ದರು. ಕಾವು ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ರಮೇಶ್ ರೈ ಸಾಂತ್ಯ, ಮಂಗಳೂರಿನ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಡಾ.ನಯನಶ್ರೀ, ಕಾವು ಲಯನ್ಸ್ ಪೂರ್ವಾಧ್ಯಕ್ಷ ದಿವ್ಯನಾಥ ಶೆಟ್ಟಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾವು ಈಶ್ವರಮಂಗಲ ಘಟಕದ ಕಾರ್ಯದರ್ಶಿ ಅಮರನಾಥ ಆಳ್ವ, ಕೋಶಾಧಿಕಾರಿ ಅಮ್ಮು ರೈ, ಕಾವು ಲಯನ್ಸ್ ಕ್ಲಬ್ ಕಾರ್ಯದರ್ಶಿ ದೇವಿಶ ರೈ, ಕೋಶಾಧಿಕಾರಿ ಕೆ.ಇಬ್ರಾಹಿಂ ಹಾಜಿ, ಕಾವು ಸರ್ಕಾರಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಅಝೀಝ್, ಕಾರ್ಯದರ್ಶಿ ಹರೀಶ್ ಕುಂಜತ್ತಾಯ ಮತ್ತಿತರರು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಪಾವನರಾಮ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಮುಖ್ಯಶಿಕ್ಷಕಿ ಪ್ರತಿಮಾ ಎಸ್. ಸ್ವಾಗತಿಸಿದರು. ಸಹಶಿಕ್ಷಕಿ ಶಮೀಮಾ ವಂದಿಸಿದರು. ಶಿಕ್ಷಕಿ ವಸಂತಿ ನಿರೂಪಿಸಿದರು. ಮಂಗಳೂರು ಶಾರದಾ ಯೋಗ ಮತ್ತು ನ್ಯಾಚುರೋಪತಿ ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಉಚಿತ ಆರೋಗ್ಯ ಶಿಬಿರ ನಡೆಸಿಕೊಟ್ಟರು.