ದೇವಚಳ್ಳ ಶಾಲೆ ಶತಮಾನೋತ್ಸವ ಸಂಭ್ರಮ

Published on

ಸುಳ್ಯ: ದೇವಚಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಸಂಭ್ರಮದಲ್ಲಿದ್ದು, ಡಿಸೆಂಬರ್ 13ರಿಂದ ಮೂರು ದಿನ ಅದ್ದೂರಿ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, 18-12-1920ರಂದು ಆಗಿನ ಡಿಸ್ಟ್ರಿಕ್ಟ್ ಬೋರ್ಡ್ ಎಲಿಮೆಂಟರಿ ಶಾಲೆಯಾಗಿ ಪ್ರಾರಂಭಗೊಂಡ ಈ ಶಾಲೆ 1960ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿತು. ಈ ಶಾಲೆಯಲ್ಲಿ 4,500ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. ಪ್ರಸ್ತುತ 167 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶತಮಾನೋತ್ಸವ ಪೂರೈಸಿದ ಹಿನ್ನೆಲೆಯಲ್ಲಿ ಡಿಸೆಂಬರ್ 13, 14, 15ರಂದು ಶತಮಾನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಲೆ ನಡೆದು ಬಂದ ನೂರು ವರ್ಷಗಳ ಪಯಣದ ವಿಶೇಷ ಸಾಕ್ಷೃ ಚಿತ್ರ ತಯಾರಿಸಿ ಶತಮಾನೋತ್ಸವದ ಅಂತಿಮ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದವರು ವಿವರಿಸಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಾನಂದ ಪಟ್ಟೆ, ಮುಖ್ಯಶಿಕ್ಷಕ ಶ್ರೀಧರ ಗೌಡ ಕೆರೆಮೂಲೆ, ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ, ಕೋಶಾಧಿಕಾರಿ ರಾಧಾಕೃಷ್ಣ ಕೆ.ಆರ್.ಮಾವಿನಕಟ್ಟೆ, ಕಾರ್ಯದರ್ಶಿಗಳಾದ ಕಿರಣ್ ಗುಡ್ಡೆಮನೆ, ಜಯಂತ ತಳೂರು, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಹರಿಪ್ರಸಾದ್ ಬಿ.ವಿ.ಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net