ಅತ್ಯಾಚಾರಿಗಳ ಬಂಧನಕ್ಕೆ ಹೆಚ್ಚಿದ ಒತ್ತಡ

201221 Gora Sena National Organization protests at Devadurga
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಂಡಾವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ದೇವದುರ್ಗದಲ್ಲಿ ಗೋರಾ ಸೇನಾ ರಾಷ್ಟ್ರೀಯ ಸಂಘಟನೆ ಸೋಮವಾರ ಪ್ರತಿಭಟನೆ ನಡೆಸಿತು.
Published on

ದೇವದುರ್ಗ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಂಡಾವೊಂದರ ಬಂಜಾರ ಸಮುದಾಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ಮಿನಿವಿಧಾನಸೌಧ ಮುಂಭಾಗದಲ್ಲಿ ಗೋರ ಸೇನಾ ರಾಷ್ಟ್ರೀಯ ಸಂಘಟನೆ ಸೋಮವಾರ ಪ್ರತಿಭಟನೆ ನಡೆಸಿತು.

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ. ರಾಜ್ಯದಲ್ಲಿ ದಲಿತರ ಮೇಲೆ ಇಂಥ ಘಟನೆಗಳು ನಡೆಯುತ್ತಿರುವುದು ತೀವ್ರ ಖಂಡನೀಯ. ಮಹಿಳೆ, ಬಾಲಕಿಯರ ಮೇಲೆ ಅತ್ಯಾಚಾರ, ಹಲ್ಲೆ ಘಟನೆಗಳು ಪದೇಪದೆ ನಡೆಯುತ್ತಿವೆ. ಇದು ಕಾನೂನು ವ್ಯವಸ್ಥೆಗೆ ಸವಾಲ್ ಆಗಿದೆ. ಈ ಬಗ್ಗೆ ಕಠಿಣ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮುಂದೆ ಇಂಥ ಘಟನೆಗಳು ನಡೆಯದಂತಹ ಕಾನೂನು ಜಾರಿಗೆ ತರಬೇಕು. ಮಹಿಳೆಯರು, ಬಾಲಕಿಯರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ತಹಸೀಲ್ದಾರ್ ಶ್ರೀನಿವಾಸ್ ಚಾಪಲ್‌ಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net