ಹೆಚ್ಚುವರಿ ಡಿಡಿಪಿಐ ಕಚೇರಿ ಮಂಜೂರು, ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

040622 Devadurga Shonors the talented SLC students
ದೇವದುರ್ಗದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಕೆ.ಶಿವನಗೌಡ ನಾಯಕ ಶುಕ್ರವಾರ ಉದ್ಘಾಟಿಸಿದರು.
Published on

ದೇವದುರ್ಗ: ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿದ್ದ ದೇವದುರ್ಗ ತಾಲೂಕು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡುತ್ತಿದೆ. ಎಸ್ಸೆಸ್ಸೆಲ್ಸಿ ಸೇರಿ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆದಿದೆ. ಇನ್ನಷ್ಟು ಶೈಕ್ಷಣಿಕ ಪ್ರಗತಿ ಸಾಧಿಸುವ ದೃಷ್ಟಿಯಿಂದ ಪಟ್ಟಣದಲ್ಲಿ ಹೆಚ್ಚುವರಿ ಡಿಡಿಪಿಐ ಕಚೇರಿ ಮಂಜೂರು ಮಾಡಿಸಲಾಗುವುದು ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

ಪಟ್ಟಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಹೆಚ್ಚುವರಿ ಉಪನಿರ್ದೇಶಕರ ಕಚೇರಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕಳೆದ ವರ್ಷ ಪ್ರಸ್ತಾವನೆ ಸಲ್ಲಿಸಿದ್ದೇನೆ. ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದ್ದು, ಶೀಘ್ರ ಮಂಜೂರಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net